ಬಂಟ್ವಾಳ, ಅಕ್ಟೋಬರ್ 21, 2022 (ಕರಾವಳಿ ಟೈಮ್ಸ್) : ತಾಲೂಕಿನ ಮಣಿಹಳ್ಳದಲ್ಲಿ ಶುಕ್ರವಾರ ಬೆಳಿಗ್ಗೆ ಕಾರುಗಳ ಹಾಗೂ ಬಸ್ಸಿನ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ವಿಟ್ಲ ಮೆಸ್ಕಾಂ ಎ ಇ ಪ್ರವೀಣ್ ಜೋಶಿ ಮೃತಪಟ್ಟಿದ್ದು, ಇನ್ನೊಂದು ಕಾರಿನಲ್ಲಿದ್ದ ಇತರ ನಾಲ್ಕು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಂಟ್ವಾಳ ಕಡೆಯಿಂದ ವಗ್ಗ ಕಡೆಗೆ ಹೋಗುತ್ತಿದ್ದ ಬ್ರಿಝಾ ಕಾರು, ವಗ್ಗದ ಮದ್ವದಿಂದ ಬರುತ್ತಿದ್ದ ಮೆಸ್ಕಾಂ ಅಧಿಕಾರಿ ಪ್ರವೀಣ್ ಜೋಶಿ ಅವರ ಫಿಗೋ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಬಳಿಕ ಹಿಂಬದಿಯಿಂದ ಬಂದ ಬಸ್ ಕಾರುಗಳಿಗೆ ಡಿಕ್ಕಿ ಹೊಡೆದು ಅಪಘಾತ ಮತ್ತಷ್ಟು ಭೀಕರತೆ ಪಡೆದುಕೊಂಡಿದೆ ಎನ್ನಲಾಗಿದೆ. ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ಎ ಇ ಜೋಶಿ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಅಪಘಾತದಿಂದ ಎ ಇ ಜೋಶಿ ಅವರ ಸಂಚರಿಸುತ್ತಿದ್ದ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಸ್ಥಳೀಯರು ತೀವ್ರ ಸಾಹಸಪಟ್ಟು ಜೋಶಿ ಅವರನ್ನು ಕಾರಿನಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ ಎನ್ನಲಾಗಿದೆ.
0 comments:
Post a Comment