ದ.ಕ, ಚಾಮರಾಜನಗರ, ಉತ್ತರ ಕನ್ನಡ ಡೀಸಿಗಳ ಸಹಿತ ರಾಜ್ಯದ 21 ಐಎಎಸ್ ಅಧಿಕಾರಿಗಳ ವರ್ಗಾವಣೆ - Karavali Times ದ.ಕ, ಚಾಮರಾಜನಗರ, ಉತ್ತರ ಕನ್ನಡ ಡೀಸಿಗಳ ಸಹಿತ ರಾಜ್ಯದ 21 ಐಎಎಸ್ ಅಧಿಕಾರಿಗಳ ವರ್ಗಾವಣೆ - Karavali Times

728x90

21 October 2022

ದ.ಕ, ಚಾಮರಾಜನಗರ, ಉತ್ತರ ಕನ್ನಡ ಡೀಸಿಗಳ ಸಹಿತ ರಾಜ್ಯದ 21 ಐಎಎಸ್ ಅಧಿಕಾರಿಗಳ ವರ್ಗಾವಣೆ

ದಕ್ಷಿಣ ಕನ್ನಡದಿಂದ ವರ್ಗಾವಣೆಗೊಂಡಿರುವ ಡಾ ರಾಜೇಂದ್ರಗೆ ಮೈಸೂರು ಜಿಲ್ಲಾಧಿಕಾರಿ ಹೊಣೆ 





ಬೆಂಗಳೂರು, ಅಕ್ಟೋಬರ್ 22, 2022 (ಕರಾವಳಿ ಟೈಮ್ಸ್) : ರಾಜ್ಯದ ದಕ್ಷಿಣ ಕನ್ನಡ, ಚಾಮರಾಜನಗರ ಹಾಗೂ ಉತ್ತರಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಹಿತ ರಾಜ್ಯದ 21 ಐಎಎಸ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಶುಕ್ರವಾರ (ಅ 21)  ಆದೇಶ ಹೊರಡಿಸಿದೆ. 

ದ.ಕ ಜಿಲ್ಲಾಧಿಕಾರಿಯಾಗಿದ್ದ ಡಾ. ಕೆ.ವಿ. ರಾಜೇಂದ್ರ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಸದ್ಯ ದ.ಕ ಜಿಲ್ಲಾ ಪಂಚಾಯತ್ ಸಿಇಓ ಡಾ ಕುಮಾರ್ ಅವರನ್ನು ದ.ಕ ಜಿಲ್ಲಾಧಿಕಾರಿಯಾಗಿ ಪ್ರಭಾರ ನೆಲೆಯಲ್ಲಿ ನಿಯುಕ್ತಿಗೊಳಿಸಲಾಗಿದೆ. ಡಾ. ಕೆ.ವಿ. ರಾಜೇಂದ್ರ ಅವರು ಕಳೆದ ಎರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. 

ಮೈಸೂರಿನ ಜಿಲ್ಲಾಧಿಕಾರಿಯಾಗಿದ್ದ ಡಾ. ಬಗಾದಿ ಗೌತಮ್ ಅವರನ್ನು ಬೆಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ.

ಚಾಮರಾಜನಗರ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಇವರ ಸ್ಥಾನಕ್ಕೆ ಡಿ.ಎಸ್. ರಮೇಶ್ ನೇಮಕ ಮಾಡಲಾಗಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದ ಡಿ.ಎಸ್. ರಮೇಶ್ ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದಾರೆ. ಚಾರುಲತಾ ಸೋಮಲ್ ಅವರು 2021ರ ನ. 16ರಿಂದ ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ಸೇವೆ ಆರಂಭಿಸಿದ್ದರು. ಒಂದೇ ವರ್ಷದೊಳಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ವರ್ಗಾವಣೆಯಾಗಿದ್ದಾರೆ. 

ಉತ್ತರಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಬೆಂಗಳೂರಿಗೆ ವರ್ಗಾವಣೆಯಾಗಿದ್ದಾರೆ. ಮುಲ್ಲೈ ಮುಹಿಲನ್ ಅವರು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಆಯುಕ್ತರಾಗಿ ನೇಮಕಗೊಂಡಿದ್ದಾರೆ. ಹರೀಶ್ ಕುಮಾರ್ ಬಳಿಕ ಮುಲ್ಲೈ ಮುಹಿಲನ್ 2021 ಫೆ. 7 ರಂದು ಉತ್ತರ ಕನ್ನಡಕ್ಕೆ ಡಿಸಿಯಾಗಿ ನೇಮಕಗೊಂಡಿದ್ದರು. ಮುಲ್ಲೈ ಮುಹಿಲನ್ ಜಾಗಕ್ಕೆ ಹಟ್ಟಿ ಗೋಲ್ಡ್‍ಮೈನ್ಸ್ ಕಂಪೆನಿಯ ಆಡಳಿತ ನಿರ್ದೇಶಕ ಪ್ರಭುಲಿಂಗ ಕವಲಿಕಟ್ಟಿ ಅವರು ಜಿಲ್ಲಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.

ಮಂಡ್ಯ ಜಿಲ್ಲಾಧಿಕಾರಿ ಅಶ್ವತಿ ಎಸ್ ಅವರನ್ನು ಬೆಂಗಳೂರಿನ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಗೆ ಆಯುಕ್ತರಾಗಿ ವರ್ಗಾಯಿಸಲಾಗಿದೆ. ಹಾವೇರಿ ಜಿಲ್ಲಾಧಿಕಾರಿಯಾಗಿ ರಘುನಂದನ್ ಮೂರ್ತಿ ಅವರನ್ನು ವರ್ಗಾಯಿಸಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ದ.ಕ, ಚಾಮರಾಜನಗರ, ಉತ್ತರ ಕನ್ನಡ ಡೀಸಿಗಳ ಸಹಿತ ರಾಜ್ಯದ 21 ಐಎಎಸ್ ಅಧಿಕಾರಿಗಳ ವರ್ಗಾವಣೆ Rating: 5 Reviewed By: karavali Times
Scroll to Top