ಬಂಟ್ವಾಳ, ಅಕ್ಟೋಬರ್ 25, 2022 (ಕರಾವಳಿ ಟೈಮ್ಸ್) : ತಾಲೂಕಿನ ಕೊಯಿಲ ಪೇಟೆ ಸಮೀಪದ ಕುದ್ಮಾಣಿ ಕಿರು ಸೇತುವೆ ಮೇಲೆ ಮಂಗಳವಾರ ಮಧ್ಯಾಹ್ನ ನಡೆದ ಅಪಘಾತದಲ್ಲಿ ಗೂಡ್ಸ್ ಟೆಂಪೆÇೀ ಡಿಕ್ಕಿ ಹೊಡೆದು ಬೈಕ್ ಸವಾರ ತೆಂಕ ಮಿಜಾರು ನಿವಾಸಿ ದಿನೇಶ್ (23) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ದಿನೇಶ್ ಅವರು ಮೂಡುಬಿದ್ರೆ ಕಡೆಯಿಂದ ಬಂಟ್ವಾಳ ಕಡೆಗೆ ಬೈಕಿನಲ್ಲಿ ಸಂಚರಿಸುತ್ತಿದ್ದ ವೇಳೆ ಬಿ ಸಿ ರೋಡಿನಿಂದ ಮೂಡುಬಿದ್ರೆ ಕಡೆಗೆ ಹೋಗುತ್ತಿದ್ದ ಗೂಡ್ಸ್ ಟೆಂಪೆÇೀ ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಬೈಕ್ ಸವಾರ ದಿನೇಶ್ ತಲೆ ರಸ್ತೆಗೆ ಬಡಿದು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಬಂಟ್ವಾಳ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
0 comments:
Post a Comment