ಬೆಳ್ತಂಗಡಿ, ನವೆಂಬರ್ 01, 2022 (ಕರಾವಳಿ ಟೈಮ್ಸ್) : 2017 ರಲ್ಲಿ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪಿ ಲಾರಿ ಚಾಲಕ, ಬೆಳ್ತಂಗಡಿ ತಾಲೂಕು, ನ್ಯಾಯತರ್ಪು ಗ್ರಾಮದ, ಮೊಡಂತ್ಯಾರಡ್ಡ ನಿವಾಸಿ ಸಂಜೀವ ಪೂಜಾರಿ ಅವರ ಪುತ್ರ ದಿನೇಶ್ ಎಂಬಾತನಿಗೆ ಮಂಗಳೂರು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ವಿಧಿಸಿ ತೀರ್ಪು ನೀಡಿದೆ.
2017 ರ ನವೆಂಬರ್ 24 ರಂದು ಆರೋಪಿ ದಿನೇಶ ಎಂಬಾತನು ತನ್ನ ಟಿಪ್ಪರ್ ಲಾರಿಯಲ್ಲಿ ಮಧ್ಯಾಹ್ನ 1.30 ರ ವೇಳೆಗೆ ಬೆಳ್ತಂಗಡಿ ತಾಲೂಕು ಕಳಿಯ ಗ್ರಾಮದ ರೇಷ್ಮೆ ರೋಡ್ ಬಳಿ ಬಂದಾಗ ಪ್ರದೀಪ ಎಂಬಾತನನ್ನು ಕಂಡು ಪೂರ್ವ ದ್ವೇಷದಿಂದ ಕೊಲೆ ಮಾಡುವ ಉದ್ದೇಶದಿಂದ ಪ್ರದೀಪನನ್ನು ಕೈ ಸನ್ನೆ ಮಾಡಿ ಟಿಪ್ಪರ್ ಲಾರಿ ಬಳಿ ಕರೆದು ಅವಾಚ್ಯ ಶಬ್ದಗಳಿಂದ ಬೈದು ಕಬ್ಬಿಣದ ಲಿವರ್ ನಿಂದ ಪ್ರದೀಪನ ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೆÇಲೀಸ್ ಠಾಣೆಯಲ್ಲಿ ಹರೀಶ್ ಎಂಬವರು ನೀಡಿದ ದೂರಿನಂತೆ ಅಪರಾಧ ಕ್ರಮಾಂಕ 217/2017 ಕಲಂ 302 ಐಪಿಸಿಯಂತೆ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ಅಂದಿನ ಬೆಳ್ತಂಗಡಿ ಪೆÇಲೀಸ್ ವೃತ್ತ ನಿರೀಕ್ಷಕರಾಗಿದ್ದ ನಾಗೇಶ್ ಕದ್ರಿ ಅವರು ತನಿಖೆ ನಡೆಸಿ ಆರೋಪಿಯ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಮಂಗಳೂರು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂದ ವಿಧಿಸಿ ತೀರ್ಪು ನೀಡಿದೆ.
ಪ್ರಕರಣದಲ್ಲಿ ತನಿಖಾ ಸಹಾಯಕರಾಗಿ ಪ್ರಸ್ತುತ ವೇಣೂರು ಠಾಣಾ ಎ ಎಸ್ ಐ ವೆಂಕಟೇಶ್ ನಾಯ್ಕ್ ಅವರು ಸಹಕರಿಸಿದ್ದು, ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ಶೇಖರ್ ಶೆಟ್ಟಿ ಮತ್ತು ಶ್ರೀಮತಿ ಜುಡಿತ್ ಕ್ರಾಸ್ತಾ ಅವರು ವಾದ ಮಂಡಿಸಿರುತ್ತಾರೆ.
0 comments:
Post a Comment