ಬಂಟ್ವಾಳ, ಅಕ್ಟೋಬರ್ 06, 2022 (ಕರಾವಳಿ ಟೈಮ್ಸ್) : ತಾಲೂಕಿನ ನಾವೂರು ಗ್ರಾಮ ಪಂಚಾಯತಿನ ದೇವಸ್ಯಪಡೂರು ವಾರ್ಡ್ ಸಂಖ್ಯೆ-1 ರ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ದಿನಾಂಕ ಘೋಷಿಸಿದೆ ಎಂದು ತಾಲೂಕು ತಹಶೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ.
ಅಕ್ಟೋಬರ್ 13 ರಂದು ಚುನಾವಣೆ ಬಗ್ಗೆ ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಲಿದ್ದು, ಅಂದಿನಿಂದ ನಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ. ಅಕ್ಟೋಬರ್ 18 ರಂದು ನಾಮಪತ್ರ ಸ್ವೀಕರಿಸಲು ಕೊನೆ ದಿನಾಂಕವಾಗಿದ್ದು, 19 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅ 21 ರಂದು ನಾಮಪತ್ರ ವಾಪಾಸು ಪಡೆಯಲು ಕೊನೆ ದಿನಾಂಕವಾಗಿದೆ. ಅ 28 ರಂದು ಶುಕ್ರವಾರ ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಮರು ಮತದಾನ ಅವಶ್ಯವಿದ್ದರೆ ಅ 30 ರಂದು ನಡೆಯಲಿದ್ದು, ಅ 31 ರಂದು ಬೆಳಿಗ್ಗೆ 8 ಗಂಟೆಯಿಂದ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಮತ ಎಣಿಕೆ ನಡೆಯಲಿದೆ. ಅ 13 ರಿಂದ 31ರವರೆಗೆ ನಾವೂರು ಗ್ರಾ ಪಂ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರಲಿದೆ ಎಂದು ತಹಶೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ.
0 comments:
Post a Comment