ಮಂಗಳೂರು, ನವೆಂಬರ್ 01, 2022 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ರವಿ ಕುಮಾರ್ ಎಂ ಆರ್ ಅವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಡಾ ರಾಜೇಂದ್ರ ಕೆ ವಿ ಅವರ ವರ್ಗಾವಣೆಯಿಂದ ತೆರವುಗೊಂಡಿದ್ದ ಮಂಗಳೂರು ಜಿಲ್ಲಾಧಿಕಾರಿ ಹುದ್ದೆಗೆ ಇದೀಗ ರವಿ ಕುಮಾರ್ ಬಂದಿದ್ದಾರೆ.
ಡಾ ರಾಜೇಂದ್ರ ಕೆ ವಿ ಅವರ ವರ್ಗಾವಣೆ ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ ಕುಮಾರ್ ಅವರಿಗೆ ಜಿಲ್ಲಾಧಿಕಾರಿಯಾಗಿ ಹೆಚ್ಚುವರಿ ಹೊಣೆ ವಹಿಸಲಾಗಿತ್ತು. ಇದೀಗ ಡಾ ಕುಮಾರ್ ಅವರಿಂದ ನೂತನ ಜಿಲ್ಲಾಧಿಕಾರಿ ರವಿ ಕುಮಾರ್ ಎಂ ಆರ್ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.
0 comments:
Post a Comment