ಬಂಟ್ವಾಳ, ಅಕ್ಟೋಬರ್ 21, 2022 (ಕರಾವಳಿ ಟೈಮ್ಸ್) : ತಾಲೂಕಿನ ಬರಿಮಾರು ಗ್ರಾಮದ ಗಾಣದಪಾಲು ನಿವಾಸಿ ಪದ್ಮನಾಭ ಪೂಜಾರಿ ಅವರ ಪತ್ನಿ ದೀಕ್ಷಿತಾ ಅವರು ಮಂಗಳೂರಿನ ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಎರಡು ಹೆಣ್ಣು ಹಾಗೂ ಒಂದು ಗಂಡು ಸಹಿತ ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಮೊದಲು ಗಂಡು ಮಗುವಿಗೆ ಜನ್ಮ ನೀಡಿದ ದೀಕ್ಷಿತಾ ಬಳಿಕ ಎರಡು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಮಂಗಳೂರು ಲೇಡಿಗೋಷನ್ ಆಸ್ಪತ್ರೆಯಲ್ಲಿ ಡಾ ವಿ£ೀತ ಶೆಟ್ಟಿ ಅವರ ತಂಡ ಸಿಸೇರಿಯನ್ ಮೂಲಕ ಮಕ್ಕಳನ್ನು ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ಮೂರೂ ಮಕ್ಕಳ ತೂಕ ಕಡಿಮೆ ಇರುವುದರಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಕಳೆದ ಒಂದೂವರೆ ತಿಂಗಳಿನಿಂದ ಲೇಡಿಗೋಷನ್ ಆಸ್ಪತ್ರೆಯ ವೈದ್ಯರು ವಿಶೇಷ ಕಾಳಜಿಯಿಂದ ವೈದ್ಯಕೀಯ ಚಿಕಿತ್ಸೆ ನೀಡಿ ಆರೋಗ್ಯಕರ ಹೆರಿಗೆಗೆ ಸಹರಿಸಿದ್ದಾರೆ. ಪರಿಣಾಮ ತಾಯಿ ಮಕ್ಕಳು ಆರೋಗ್ಯದಿಂದಿದ್ದಾರೆ.
0 comments:
Post a Comment