ಬಂಟ್ವಾಳ, ಅಕ್ಟೋಬರ್ 22, 2022 (ಕರಾವಳಿ ಟೈಮ್ಸ್) : ಬಂಟ್ವಾಳ ತಾಲೂಕು ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ ಭಾನುವಾರ ಇಲ್ಲಿನ ಮಿನಿ ವಿಧಾನಸೌಧ ಸಭಾಂಗಣದಲ್ಲಿ ನಡೆಯಿತು.
ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ
ಉಪತಹಸೀಲ್ದಾರ್ ರಾಜೇಶ್ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ತಾಲೂಕು ಚುನಾವಣೆ ಶಾಖೆಯ ನಾರಾಯಣ ಗೌಡ ಸ್ವಾಗತಿಸಿ, ವಂದಿಸಿದರು.
0 comments:
Post a Comment