ಬಂಟ್ವಾಳ, ನವೆಂಬರ್ 21, 2022 (ಕರಾವಳಿ ಟೈಮ್ಸ್) : ಎಸ್ಕೆಎಸ್ಸೆಸ್ಸೆಫ್ ಆಲಡ್ಕ ಶಾಖೆಯ 9ನೇ ವಾರ್ಷಿಕೋತ್ಸವದ ಪ್ರಯುಕ್ತ ಶಂಸುಲ್ ಉಲಮಾ (ಖ.ಸಿ.) ಹಾಗೂ ಅಗಲಿದ ಸಮಸ್ತ ನೇತಾರರ ಅನುಸ್ಮರಣೆ ಹಾಗೂ ಸನ್ಮಾನ ಕಾರ್ಯಕ್ರಮ ನವೆಂಬರ್ 26 ರಂದು ಶನಿವಾರ ಮಗ್ರಿಬ್ ನಮಾಝ್ ಬಳಿಕ ಆಲಡ್ಕ ಶಂಸುಲ್ ಉಲಮಾ ಇಸ್ಲಾಮಿಕ್ ಸೆಂಟರ್ ವಠಾರ ಮರ್‍ಹೂಂ ಮಿತ್ತಬೈಲ್ ಉಸ್ತಾದ್ ವೇದಿಕೆಯಲ್ಲಿ ನಡೆಯಲಿದೆ.
ಶಾಖಾಧ್ಯಕ್ಷ ಮುಹಮ್ಮದ್ ಹನೀಫ್ ಹಾಸ್ಕೋ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಯ್ಯಿದ್ ಹುಸೈನ್ ಬಾ-ಅಲವಿ ತಂಙಳ್ ಕುಕ್ಕಾಜೆ ದುವಾ ನೆರವೇರಿಸುವರು. ಉಸ್ಮಾನುಲ್ ಫೈಝಿ ತೋಡಾರು ಉದ್ಘಾಟಿಸುವರು. ಎಸ್ಕೆಎಸ್ಸೆಸ್ಸೆಫ್ ದ ಕ ಜಿಲ್ಲಾ ವೆಸ್ಟ್ ಉಪಾಧ್ಯಕ್ಷ ಎ ಎಂ ಅಬೂಸ್ವಾಲಿಹ್ ಫೈಝಿ ಅನುಸ್ಮರಣಾ ಭಾಷಣಗೈಯುವರು. ಕಲಾಯಿ ಮದೀನಾ ಜುಮಾ ಮಸೀದಿ ಖತೀಬ್ ಇಲ್ಯಾಸ್ ಅರ್ಶದಿ ಮುಖ್ಯ ಭಾಷಣಗೈಯುವರು. ಎಸ್ಕೆಎಸ್ಸೆಸ್ಸೆಫ್ ಬಂಟ್ವಾಳ ವಲಯಾಧ್ಯಕ್ಷ ಇರ್ಶಾದ್ ದಾರಿಮಿ ಅಲ್-ಜಝರಿ, ಬಂಟ್ವಾಳ ಪುರಸಭಾ ಸದಸ್ಯ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ ಸಹಿತ ಹಲವು ಗಣ್ಯರು ಭಾಗವಹಿಸುವರು.
ಇದೇ ವೇಳೆ ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾ ಕೇಂದ್ರ ಮುಶಾವರ ಸದಸ್ಯ ಉಸ್ಮಾನುಲ್ ಫೈಝಿ ಅವರನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ಸ್ತ್ರೀಯರಿಗೆ ಪ್ರತ್ಯೇಕ ಸ್ಥಳಾವಕಾಶ ಏರ್ಪಡಿಸಲಾಗಿದ್ದು, ಕೊನೆಯಲ್ಲಿ ತಬರ್ರುಕ್ ವಿತರಣೆ ನಡೆಯಲಿದೆ ಎಂದು ಎಸ್ಕೆಎಸ್ಸೆಸ್ಸೆಫ್ ಶಾಖಾ ಪ್ರಕಟಣೆ ತಿಳಿಸಿದೆ.
0 comments:
Post a Comment