ಬಂಟ್ವಾಳ, ನವೆಂಬರ್ 25, 2022 (ಕರಾವಳಿ ಟೈಮ್ಸ್) : ತಾಲೂಕಿನ ಉಳಿ ಗ್ರಾಮದ ಕಕ್ಯಪದವು-ಮೈರ ಶ್ರೀ ರಾಮಾಂಜನೇಯ ಗೆಳೆಯರ ಬಳಗ (ರಿ) ಇದರ ಆಶ್ರಯದಲ್ಲಿ ದಶಮಾನೋತ್ಸವ ಸಂಭ್ರಮದ ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳವು ನವೆಂಬರ್ 26 ರಂದು ಶನಿವಾರ ಮೈರ-ಬರ್ಕೆಜಾಲು ಎಂಬಲ್ಲಿ ನಡೆಯಲಿದೆ ಎಂದು ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿ ತಿಳಿಸಿದರು.
ಗುರುವಾರ ಸಂಜೆ ಬಿ ಸಿ ರೋಡಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ನೇತೃತ್ವದಲ್ಲಿ ನಡೆಯುವ ಈ ಕಂಬಳ ಕೂಟದಲ್ಲಿ ವೇದಮೂರ್ತಿ ಶ್ರೀ ರಾಘವೇಂದ್ರ ಭಟ್ ಕೊಡಂಬೆಟ್ಟು ಕಾರಿಂಜ ಅವರು ಶುಭಾಶೀರ್ವಾದಗೈಯುವರು. ಉಳಿ ಗೋಪಾಲಕೃಷ್ಣ ದೇವಸ್ಥಾನದ ಪ್ರಧಾನ ಅರ್ಚಕ ಯೋಗೇಂದ್ರ ಭಟ್ ಕೂಟವನ್ನು ಉದ್ಘಾಟಿಸುವರು ಎಂದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂಧನೆ ನಡೆಯಲಿದೆ. ಸ್ಥಳೀಯ ಕೋಣಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಈ ಬಾರಿಯ ಕಂಬಳದಲ್ಲಿ ಮರಿ ಕೋಣದ ಸ್ಪರ್ಧೆ ಆಯೋಜಿಸಲಾಗಿದೆ ಎಂದವರು ಇದೇ ವೇಳೆ ತಿಳಿಸಿದರು.
0 comments:
Post a Comment