ಕನ್ನಡವನ್ನು ತಾಯಿಯಂತೆ ಕಂಡು ಇತರ ಭಾಷೆಗಳನ್ನು ಸೋದರರಂತೆ ಕಾಣುವ ಮೂಲಕ ಭಾಷಾ ಸೌಹಾರ್ದತೆ ಮೆರೆಯಬೇಕಾದ ಅನಿವಾರ್ಯತೆ ಇದೆ - Karavali Times ಕನ್ನಡವನ್ನು ತಾಯಿಯಂತೆ ಕಂಡು ಇತರ ಭಾಷೆಗಳನ್ನು ಸೋದರರಂತೆ ಕಾಣುವ ಮೂಲಕ ಭಾಷಾ ಸೌಹಾರ್ದತೆ ಮೆರೆಯಬೇಕಾದ ಅನಿವಾರ್ಯತೆ ಇದೆ - Karavali Times

728x90

1 November 2022

ಕನ್ನಡವನ್ನು ತಾಯಿಯಂತೆ ಕಂಡು ಇತರ ಭಾಷೆಗಳನ್ನು ಸೋದರರಂತೆ ಕಾಣುವ ಮೂಲಕ ಭಾಷಾ ಸೌಹಾರ್ದತೆ ಮೆರೆಯಬೇಕಾದ ಅನಿವಾರ್ಯತೆ ಇದೆ


-ಡಿ.ಎಸ್.ಐ.ಬಿ ಪಾಣೆಮಂಗಳೂರು



ಪ್ರತಿ ಕನ್ನಡಿಗನ, ಕರುನಾಡಿದ ಹೆಮ್ಮೆಯ ದಿನ ಕನ್ನಡ ರಾಜ್ಯೋತ್ಸವ. ಮೈಸೂರು ಪ್ರಾಂತ್ಯ ಎಂಬ ಹೆಸರಿನ ಮೂಲಕ ಕರೆಯಲ್ಪಡುತ್ತಿದ್ದ ಹಾಗೂ ವಿಭಾಗಗಳಾಗಿ ಚದುರಿದ್ದ ನಾಡನ್ನು 1956ರ ನವೆಂಬರ್ 1ರಂದು “ಕರ್ನಾಟಕ’’ ಎಂದು ಮರುನಾಮಕರಣ ಮಾಡಲಾಯಿತು. ಅಂದಿನಿಂದ ಪ್ರತಿ ವರ್ಷ ನವೆಂಬರ್ 1 ರಂದು ನಾಡಿನಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. 

ಕರ್ನಾಟಕದ ಹುಟ್ಟಿಗೆ ಕಾರಣರಾದ ಕನ್ನಡದ ಕುಲ ಪುರೋಹಿತ ಎಂದೇ ಹೆಸರಾದ ಆಲೂರು ವೆಂಕಟರಾವ್ ಅವರು ಮೊದಲಿಗೆ ಕರ್ನಾಟಕ ಏಕೀಕರಣ ಚಳುವಳಿಯನ್ನು ಸ್ವಾತಂತ್ರ್ಯ ಪೂರ್ವದಲ್ಲೇ ಅಂದರೆ 1905 ರಲ್ಲಿ ಪ್ರಾರಂಭಿಸಿದರು. ನಂತರ ಭಾರತಕ್ಕೆ ಸ್ವಾತಂತ್ರ್ಯ ದೊರೆತು ಗಣರಾಜ್ಯವಾದ ನಂತರ ಭಾಷೆಗಳ ಆಧಾರದ ಮೇಲೆ 1956ರ ನವೆಂಬರ್ 1 ರಂದು ರಾಜ್ಯಗಳನ್ನು ವಿಂಗಡಿಸಿದರು. ಅದರಂತೆ ಮದ್ರಾಸ್, ಮುಂಬಯಿ ಮತ್ತು ಹೈದರಾಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳೆಲ್ಲವೂ ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು. ನಂತರ ಮೈಸೂರು ರಾಜ್ಯವನ್ನು ಮೂರು ವಿಭಾಗಗಳಾಗಿ ವಿಂಗಡಿಸಲಾಯಿತು. ಅವುಗಳೆಂದರೆ ಉತ್ತರ ಕರ್ನಾಟಕ, ಹಳೆಯ ಮೈಸೂರು ಹಾಗೂ ಮಲೆನಾಡು. ಕರ್ನಾಟಕ ಪದದ ಮೂಲ ಸಂಸ್ಕೃತ. ಸಂಸ್ಕೃತದ ಕನ್ನಡ ಎಂಬ ಪದದಿಂದ ಕರ್ನಾಟಕ ಹುಟ್ಟಿದೆ. ಕನ್ನಡಿಗರ ನಾಡು, ಕನ್ನಾಡು, ಕನ್ನಡ ನಾಡು ಎಂಬುದು ಇದರ ಅರ್ಥ. ಆದರೆ ಕರ್ನಾಟಕ ಎಂಬ ಪದದ ಹುಟ್ಟು ಅಥವಾ ಅರ್ಥದ ಬಗ್ಗೆ ಇನ್ನೂ ಹಲವು ಅಭಿಪ್ರಾಯಗಳೂ ಇದೆ. ಕರು+ನಾಡು= ಕರುನಾಡು ಎಂಬ ಪದವು ಕರ್ನಾಟಕವಾಯಿತು ಎನ್ನಲಾಗುತ್ತದೆ. ಕರು ಎಂದರೆ ಕಪ್ಪು, ಇದರರ್ಥ ಕಪ್ಪು ಮಣ್ಣಿನ ನಾಡು ಎಂದೂ ಸಹ ಹೇಳಲಾಗುತ್ತದೆ. ಹಳೆಯ ಗ್ರಂಥಗಳು ಇದನ್ನು ಕರ್ನಾಟ ಎಂಬ ಪದದಿಂದ ಪಡೆಯಲಾಗಿದೆ ಎಂದು ಸೂಚಿಸುತ್ತವೆ, ಕೆಲವು ಮೂಲಗಳು ಕರ್ನಾಟಕವನ್ನು ಎತ್ತರದ ಭೂಮಿಗೆ ಅನುವಾದಿಸುತ್ತದೆ.

ಉತ್ತರ ಕರ್ನಾಟಕ ಜನತೆಯ ಮಾನ್ಯತೆಗಾಗಿ ಮೈಸೂರು ಎಂಬ ಹೆಸರಿನ ಬದಲು ಕರ್ನಾಟಕ ಎಂದು ಮರುನಾಮಕರಣ ಮಾಡಬೇಕು ಎಂದು 1972ರ ಜುಲೈನಲ್ಲಿ ಈ ಬಗ್ಗೆ ಚರ್ಚೆ ಭುಗಿಲೆದ್ದಿತು. ಸಾಕಷ್ಟು ದೀರ್ಘಾವಧಿಯ ಚರ್ಚೆಗಳ ನಂತರ ರಾಜ್ಯ ವಿಧಾನಸಭೆಯಲ್ಲೂ ಇದಕ್ಕೆ ಸರ್ವಾನುಮತದಿಂದ ಅನುಮತಿ ದೊರೆಯಿತು.

ಸುಮಾರು ಎರಡೂವರೆ ಸಹಸ್ರಮಾನದ ಇತಿಹಾಸ ಹೊಂದಿರುವ ಶ್ರೀಮಂತ ಭಾಷೆ ಕನ್ನಡ. ವಿಶ್ವದ ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಕನ್ನಡ ಸಹ ಪ್ರಮುಖವಾಗಿದೆ. ಆದರೆ ವಿಷಾದವೆಂದರೆ ಇಂದಿನ ಪೆÇೀಷಕರು ಹಾಗೂ ಮಕ್ಕಳಿಗೆ ನಾಡಿನ ಭಾಷೆ, ಸಂಸ್ಕೃತಿಯ ಬಗ್ಗೆ ಅಷ್ಟು ಕಾಳಜಿ ಇದ್ದಂತೆ ಕಾಣುತ್ತಿಲ್ಲ. ಶಾಲೆಯಲ್ಲಿ ಬಿಡಿ ಮನೆಯಲ್ಲೂ ಕನ್ನಡ ಮಾತನಾಡದಂತೆ ಪೆÇೀಷಕರು ಮಕ್ಕಳಿಗೆ ತಾಕೀತು ಮಾಡುತ್ತಾರೆ ಎಂಬುದು ನಿಜಕ್ಕೂ ವಿಪರ್ಯಾಸ. ಭವಿಷ್ಯಕ್ಕಾಗಿ ಇಂಗ್ಲಿಷ್ ಬಳಕೆ ಅಥವಾ ಕಲಿಕೆ ಅನಿವಾರ್ಯವಾದರೂ ಕನ್ನಡವನ್ನು ಕಡೆಗಣಿಸುವುದು ಎಷ್ಟು ಸರಿ?. ನಾವು ಮನೆಗಳಲ್ಲೇ ಮಕ್ಕಳಿಗೆ ಈಗಿನಿಂದಲೇ ಕನ್ನಡ ಆಂಗ್ಲಮಯವಾಗಿ ಬೆಳಸಿದರೆ ಮುಂದೆ ಕನ್ನಡ ಭಾಷೆಯ ಅಸ್ತಿತ್ವ ಏನಾಗಬಹುದು? ಈ ಬಗ್ಗೆ ಎಲ್ಲಾ ಪೆÇೀಷಕರು ಖಂಡಿತವಾಗಿಯೂ ಚಿಂತಿಸಬೇಕಿದೆ.

ಇನ್ನು ಮುಂದಾದರೂ ಮಕ್ಕಳಿಗೆ ಕನ್ನಡ ಭಾಷೆ, ಇದರ ಹಿರಿಮೆ, ಮಹತ್ವವನ್ನು ತಿಳಿಸಲು ಮುಂದಾಗೋಣ. ಕನ್ನಡ ಎಂದಿಗೂ ನಮ್ಮನ್ನು ಹೆತ್ತ ತಾಯಿಯಾಗಿಯೇ ಉಳಿಯಲಿ, ಇತರೆ ಭಾಷೆಗಳನ್ನು ನಮ್ಮ ಸಂಬಂಧಿಕರಂತೆ ಭಾವಿಸೋಣ. ಸರ್ವರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.

-ಡಿ.ಎಸ್.ಐ.ಬಿ ಪಾಣೆಮಂಗಳೂರು


  • Blogger Comments
  • Facebook Comments

0 comments:

Post a Comment

Item Reviewed: ಕನ್ನಡವನ್ನು ತಾಯಿಯಂತೆ ಕಂಡು ಇತರ ಭಾಷೆಗಳನ್ನು ಸೋದರರಂತೆ ಕಾಣುವ ಮೂಲಕ ಭಾಷಾ ಸೌಹಾರ್ದತೆ ಮೆರೆಯಬೇಕಾದ ಅನಿವಾರ್ಯತೆ ಇದೆ Rating: 5 Reviewed By: karavali Times
Scroll to Top