ಕುರ್ನಾಡು : ಬೃಹತ್ ಗಾಂಜಾ ಸಾಗಾಟ ಬೇಧಿಸಿದ ಮಂಗಳೂರು ಸಿಸಿಬಿ ಪೊಲೀಸರು, ಇಬ್ಬರು ಖದೀಮರು ಅಂದರ್ - Karavali Times ಕುರ್ನಾಡು : ಬೃಹತ್ ಗಾಂಜಾ ಸಾಗಾಟ ಬೇಧಿಸಿದ ಮಂಗಳೂರು ಸಿಸಿಬಿ ಪೊಲೀಸರು, ಇಬ್ಬರು ಖದೀಮರು ಅಂದರ್ - Karavali Times

728x90

18 November 2022

ಕುರ್ನಾಡು : ಬೃಹತ್ ಗಾಂಜಾ ಸಾಗಾಟ ಬೇಧಿಸಿದ ಮಂಗಳೂರು ಸಿಸಿಬಿ ಪೊಲೀಸರು, ಇಬ್ಬರು ಖದೀಮರು ಅಂದರ್

ಬಂಟ್ವಾಳ, ನವೆಂಬರ್ 18, 2022 (ಕರಾವಳಿ ಟೈಮ್ಸ್) : ಬೃಹತ್ ಪ್ರಮಾಣದಲ್ಲಿ ಗಾಂಜಾ ಅಕ್ರಮ ಸಾಗಾಟ ಮಾಡುತ್ತಿದ್ದ ಪ್ರಕರಣ ಗುರುವಾರ ಬೇಧಿಸಿದ ನಗರದ ಸಿಸಿಬಿ ಪೊಲೀಸರು ಸುಮಾರು 132 ಕೆಜಿ ಗಾಂಜಾ, ಮಹೇಂದ್ರ ವಾಹನ  ಸಹಿತ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ. 

ಮಂಗಳೂರು ನಗರಕ್ಕೆ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಹೇಂದ್ರ ವಾಹನದಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮುಡಿಪು ಕುರ್ನಾಡು ಗ್ರಾಮದ ಕಾಯರ್ ಗೋಳಿ ಎಂಬಲ್ಲಿ ಯಶಸ್ವಿ ಕಾರ್ಯಾಚರಣೆ ನಡೆಸಿದ್ದು, ಆರೋಪಿಗಳಾದ ಬಂಟ್ವಾಳ ತಾಲೂಕು, ನರಿಂಗಾನ ಗ್ರಾಮದ ತೌಡುಗೋಳಿ ಕ್ರಾಸ್ ನಿವಾಸಿ ರಮೀಝ್ ರಾಝ್ (30) ಹಾಗೂ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆ, ಮಂಜೇಶ್ವರ-ಮೀಯಪದವು, ಮುದುಂಗಲ್ ಕಟ್ಟ, ಜೀಲಾನಿ ಮಂಝಿಲ್ ನಿವಾಸಿ ಅಬ್ದುಲ್ ಖಾದರ್ ಹ್ಯಾರಿಸ್ (30) ಎಂಬವರನ್ನು ದಸ್ತಗಿರಿ ಮಾಡಿದ್ದಾರೆ. ಆರೋಪಿಗಳ ವಶದಲ್ಲಿದ್ದ ಬಿಳಿ ಬಣ್ಣದ ನೋಂದಣಿ ಸಂಖ್ಯೆ ಕೆಎಲ್-14-ಪಿ-7775ಯ ಮಹೇಂದ್ರ ವಾಹನ ಸ್ವಾಧೀನಪಡಿಸಿಕೊಂಡು ಅದರಲ್ಲಿ ಸಾಗಾಟ ಮಾಡುತ್ತಿದ್ದ 132 ಕೆಜಿ ಗಾಂಜಾವನ್ನು, 2 ಮೊಬೈಲ್ ಫೆÇೀನ್ ಗಳನ್ನು, 3 ತಲವಾರುಗಳನ್ನು, 2180/- ರೂಪಾಯಿ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಗಾಂಜಾ, ಮಹೇಂದ್ರ ವಾಹನ ಹಾಗೂ ಮೊಬೈಲ್ ಫೆÇೀನ್ ಗಳ ಒಟ್ಟು ಮೌಲ್ಯ 39.15 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಆರೋಪಿಗಳು ಗಾಂಜಾ ಸಾಗಾಟದ ಸಮಯದಲ್ಲಿ ಪೆÇಲೀಸರು ಅಥವಾ ಸಾರ್ವಜನಿಕರು ತಡೆದರೆ ಅವರಿಗೆ ತೊಂದರೆ ನೀಡುವ ಉದ್ದೇಶದಿಂದ ತಲವಾರುಗಳನ್ನು ಕಾರಿನಲ್ಲಿ ಇರಿಸಿಕೊಂಡಿದ್ದರು ಎನ್ನಲಾಗಿದೆ. ಈ ಬಗ್ಗೆ ಮಂಗಳೂರು ಸೆನ್ ಕ್ರೈಂ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಆರೋಪಿಗಳ ಪೈಕಿ ರಮೀಝ್ ರಾಝ್ ಎಂಬಾತನ ವಿರುದ್ಧ ಈ ಹಿಂದೆ ಕೊಣಾಜೆ ಪೆÇಲೀಸ್ ಠಾಣೆಯಲ್ಲಿ ಮಾದಕ ದ್ರವ್ಯ ಸೇವನೆಗೆ ಸಂಬಂಧಪಟ್ಟಂತೆ ಒಂದು ಪ್ರಕರಣ, ಗಾಂಜಾ ಮಾರಾಟ ಮಾಡಿದ ಪ್ರಕರಣ, ಹಲ್ಲೆ ಪ್ರಕರಣ ಸಹಿತ ಒಟ್ಟು 3 ಪ್ರಕರಣ ದಾಖಲಾಗಿರುತ್ತದೆ. ಅಲ್ಲದೇ ಉಳ್ಳಾಲ ಪೆÇಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಒಂದು ಪ್ರಕರಣ ಹಾಗೂ ಕೊಲೆ ಯತ್ನ ಪ್ರಕರಣ ಮತ್ತು ಮಂಗಳೂರು ಉತ್ತರ ಪೆÇಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟದ ಒಂದು ಪ್ರಕರಣ ಸಹಿತ ಒಟ್ಟು  6 ಪ್ರಕರಣಗಳು ದಾಖಲಾಗಿರುತ್ತದೆ.

ಇನ್ನೋರ್ವ ಆರೋಪಿ ಅಬ್ದುಲ್ ಖಾದರ್ ಹ್ಯಾರಿಸ್ ಎಂಬಾತನ ವಿರುದ್ದ ಉಳ್ಳಾಲ ಪೆÇಲೀಸ್ ಠಾಣೆಯಲ್ಲಿ 2 ಕೊಲೆ ಯತ್ನ ಪ್ರಕರಣ ಹಾಗೂ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೆÇಲೀಸ್ ಠಾಣೆಯಲ್ಲಿ 2 ಹಲ್ಲೆ ಪ್ರಕರಣಗಳು ದಾಖಲಾಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಪೆÇಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್, ಪಿಎಸ್‍ಐ ರಾಜೇಂದ್ರ ಬಿ, ಎಎಸ್‍ಐಗಳಾದ ಶಶಿಧರ ಶೆಟ್ಟಿ, ಮೋಹನ್ ಕೆ ವಿ, ಹರೀಶ ಪಿ ಹಾಗೂ ಸಿಸಿಬಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಕುರ್ನಾಡು : ಬೃಹತ್ ಗಾಂಜಾ ಸಾಗಾಟ ಬೇಧಿಸಿದ ಮಂಗಳೂರು ಸಿಸಿಬಿ ಪೊಲೀಸರು, ಇಬ್ಬರು ಖದೀಮರು ಅಂದರ್ Rating: 5 Reviewed By: karavali Times
Scroll to Top