ಪುತ್ತೂರು, ನವೆಂಬರ್ 26, 2022 (ಕರಾವಳಿ ಟೈಮ್ಸ್) : ತಾಲೂಕಿನ ಕುಂಬ್ರ ನಿವಾಸಿ ಇಬ್ರಾಹಿಂ ಎಂಬವರ ಪತ್ನಿ ನೆಬೀಸ ಎಂಬ ಮಹಿಳೆಯ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ.
ಶುಕ್ರವಾರ ರಾತ್ರಿ ಎಂದಿನಂತೆ ನೆಬೀಸ ಮನೆಯಲ್ಲಿ ಊಟ ಮುಗಿಸಿ ಮಲಗಿದ್ದು, ಬೆಳಿಗ್ಗೆ ಮನೆಯ ಮುಂಬಾಗದಲ್ಲಿ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕುತೂಹಲ ಮೂಡಿಸಿದೆ. ಮಹಿಳೆ ಸ್ವತಃ ಬೆಂಕಿ ಹಚ್ಚಿಕೊಂಡು ಕೃತ್ಯ ಎಸಗಿದ್ದಾರೋ ಅಥವಾ ಆಕಸ್ಮಿಕ ಬೆಂಕಿ ಅವಘಡಕ್ಕೀಡಾಗಿ ಘಟನೆ ನಡೆದಿದೆಯೋ ಎಂಬುದು ಸದ್ಯಕ್ಕೆ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ¸
0 comments:
Post a Comment