ಬಂಟ್ವಾಳ, ನವೆಂಬರ್ 02, 2022 (ಕರಾವಳಿ ಟೈಮ್ಸ್) : ತಾಲೂಕಿನ ಸಿದ್ದಕಟ್ಟೆ ಸಮೀಪದ ಕರ್ಪೆ ನಿವಾಸಿ ಜಯ ನಾಯ್ಕ (50) ಅವರು ಬುಧವಾರ ಬೆಳಿಗ್ಗೆ ಅಡಿಕೆ ಮರದಿಂದ ಬಿದ್ದು ಸಾವನ್ನಪ್ಪಿದ್ದಾರೆ.
ಬುಧವಾರ ಬೆಳಿಗ್ಗೆ ಅಡಿಕೆ ತೋಟದಲ್ಲಿ ಮರಕ್ಕೆ ಹತ್ತಿ ಅಡಿಕೆಯನ್ನು ಕೀಳುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಗಾಯಗೊಂಡ ಅವರನ್ನು ತಕ್ಷಣ ಮೂಡುಬಿದಿರೆ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೆÇೀಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment