ಬಂಟ್ವಾಳ, ನವೆಂಬರ್ 27, 2022 (ಕರಾವಳಿ ಟೈಮ್ಸ್) : ತಾಲೂಕಿನ ಮಣಿಹಳ್ಳ ಸಮೀಪದ ಚೆಂಡ್ತಿಮಾರ್ ಎಂಬಲ್ಲಿ ಚಾಲಕನ ನಿಯಂತ್ರಣ ಮೀರಿದ ಕಾರು ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪಿಕಪ್ ವಹನ ರಸ್ತೆ ಬದಿಯ ಮನೆಗೆ ನುಗ್ಗಿದ ಘಟನೆ ಶನಿವಾರ ರಾತ್ರಿ ನಡೆದಿದೆ.
ವಗ್ಗ ಕಡೆಯಿಂದ ಬರುತ್ತಿದ್ದ ಕ್ರೆಟ್ಟಾ ಕಾರು ಬಂಟ್ವಾಳ ಕಡೆಯಿಂದ ಬರುತ್ತಿದ್ದ ಮೆಸ್ಕಾಂ ಇಲಾಖೆಗೆ ಸೇರಿದ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಅಪಘಾತದ ಸಂದರ್ಭ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದ ಪಿಕಪ್ ವಾಹನದ ಚಾಲಕ ವಾಹನವನ್ನು ರಸ್ತೆ ಬದಿಗೆ ಇಳಿಸಿದಾಗ ರಸ್ತೆ ಬದಿಯ ಮನೆಗೆ ನುಗ್ಗಿದೆ. ಘಟನೆಯಿಂದ ಮನೆಯ ಗೋಡೆಗೆ ಹಾನಿ ಸಂಭವಿಸಿದ್ದು, ವಾಹನಗಳೂ ಕೂಡಾ ಜಖಂಗೊಂಡಿದೆ. ಯಾವುದೇ ಅನಾಹುತ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
0 comments:
Post a Comment