ನವದೆಹಲಿ, ಡಿಸೆಂಬರ್ 24, 2022 (ಕರಾವಳಿ ಟೈಮ್ಸ್) : ಆಧಾರ್ ಜೊತೆ ಜೋಡಣೆಯಾಗದ ಪ್ಯಾನ್ ಕಾರ್ಡ್ ಗಳು 2023 ರ ಮಾರ್ಚ್ ತಿಂಗಳಿನಿಂದ ನಿಷ್ಕ್ರಿಯಗೊಳ್ಳಲಿದೆ ಎಂದು ಆದಾಯ ತೆರಿಗೆ ಇಲಾಖೆ ಎಚ್ಚರಿಸಿದೆ.
ಆದಾಯ ತೆರಿಗೆ ಇಲಾಖೆಯ ನೂತನ ನಿಯಮಾವಳಿಯಂತೆ ಪ್ಯಾನ್ ಕಾರ್ಡನ್ನು ಆಧಾರ್ ಕಾರ್ಡ್ ಜೊತೆಗೆ ಲಿಂಕ್ ಮಾಡುವುದು ಅಗತ್ಯವಾಗಿದೆ. ಆದ್ದರಿಂದ ಇಂದೇ ಜೋಡಣೆ ಮಾಡಿ ಎಂದು ಸಾರ್ವಜನಿಕ ಸಲಹೆಯನ್ನು ಆದಾಯ ತೆರಿಗೆ ಇಲಾಖೆ ಪ್ರಕಟಿಸಿದೆ.
ವಿನಾಯಿತಿ ವರ್ಗವನ್ನು ಹೊರತುಪಡಿಸಿ, ಎಲ್ಲಾ ಪ್ಯಾನ್ ಕಾರ್ಡ್ ಹೋಲ್ಡರ್ ಗಳು 2023 ರ ಮಾರ್ಚ್ 31ರೊಳಗೆ ಪ್ಯಾನ್ ಕಾರ್ಡನ್ನು ಆಧಾರ್ ಕಾರ್ಡ್ ಜೊತೆಗೆ ಜೋಡಣೆ ಮಾಡುವುದು ಅಗತ್ಯವಾಗಿದೆ ಇಲ್ಲದೇ ಇದ್ದಲ್ಲಿ ಪ್ಯಾನ್ ನಿಷ್ಕ್ರಿಯಗೊಳಿಸುತ್ತದೆ ಎಂದು ಇಲಾಖೆ ತಿಳಿಸಿದೆ.
2017 ರಲ್ಲಿ ಸರಕಾರದ ಅಧಿಸೂಚನೆಯ ಪ್ರಕಾರ, ಅಸ್ಸಾಂ, ಜಮ್ಮು-ಕಾಶ್ಮೀರ, ಮೇಘಾಲಯದ ಮಂದಿ ವಿನಾಯಿತಿ ವಿಭಾಗದಲ್ಲಿ ಬರುತ್ತಾರೆ, ಹಾಗೂ 80 ವರ್ಷಕ್ಕೂ ಮೇಲ್ಪಟ್ಟ ವ್ಯಕ್ತಿಗಳಿಗೆ ವಿನಾಯ್ತಿ ನೀಡಲಾಗುತ್ತದೆ.
ಪ್ಯಾನ್ ನಿಷ್ಕ್ರಿಯಗೊಂಡಲ್ಲಿ, ನಿರ್ದಿಷ್ಟ ವ್ಯಕ್ತಿ ಐಟಿ ಕಾಯ್ದೆಯ ಅಡಿ ಎದುರಾಗುವ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ನಿಷ್ಕ್ರಿಯಗೊಂಡಿರುವ ಪ್ಯಾನ್ ಕಾರ್ಡನ್ನು ಇಟ್ಟುಕೊಂಡು ಐಟಿ ರಿಟರ್ನ್ಸ್ ಸಲ್ಲಿಸುವುದಕ್ಕೆ ಸಾಧ್ಯವಾಗುವುದಿಲ್ಲ. ನಿಷ್ಕ್ರಿಯ ಪ್ಯಾನ್ ಕಾರ್ಡಿಗೆ ಬಾಕಿ ರಿಫಂಡ್ ನೀಡಲು ಬರುವುದಿಲ್ಲ. ಹಾಗೂ ತೆರಿಗೆ ಮೊತ್ತವನ್ನು ಹೆಚ್ಚಾಗಿ ಕಡಿತಗೊಳಿಸಲಾಗುತ್ತದೆ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ.
0 comments:
Post a Comment