ನವದೆಹಲಿ, ಡಿಸೆಂಬರ್ 30, 2022 (ಕರಾವಳಿ ಟೈಮ್ಸ್) : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಾಯಿ ಶತಾಯುಶಿ ಹಿರಾಬೆನ್ (100) ಅವರು ವಯೋಸಹಜ ಕಾಯಿಲೆಯಿಂದ ಶುಕ್ರವಾರ ಮುಂಜಾನೆ ವೇಳೆಗೆ ನಿಧನರಾಗಿದ್ದಾರೆ.
ವಯೋಸಹಜ ಅನಾರೋಗ್ಯಕ್ಕಾಗಿ ಅವರನ್ನು ಕಳೆದ ಎರಡು ದಿನಗಳಿಂದ ಅಹಮದಾಬಾದ್ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಶುಕ್ರವಾರ ಮುಂಜಾನೆ 3.39ರ ವೇಳೆಗೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಟ್ವೀಟ್ ಮಾಡಿ ತಿಳಿಸಿದ್ದಾರೆ. ತಾಯಿ ನಿಧನದ ಹಿನ್ನೆಲೆಯಲ್ಲಿ ಮೋದಿ ಅವರು ಅಹಮದಾಬಾದ್‍ಗೆ ತೆರಳಿದ್ದಾರೆ,
ಮೋದಿಯವರ ಸಹೋದರ ಪ್ರಹ್ಲಾದ್ ಮೋದಿಯವರ ಮನೆಯಿಂದ ಹೀರಾಬೆನ್ ಅವರ ಅಂತಿಮ ಯಾತ್ರೆ ಸಾಗಿತು. ಈ ವೇಳೆ ಪ್ರಧಾನಿ ಮೋದಿಯವರು ತಾಯಿಯ ಪಾರ್ಥೀವ ಶರೀರಕ್ಕೆ ಹೆಗಲುಕೊಟ್ಟು ನಡೆದರು. ಬಳಿಕ ಪಾರ್ಥೀವ ಶರೀರವನ್ನು ಸೆಕ್ಟರ್ 30ರ ರುದ್ರಭೂಮಿಗೆ ತರಲಾಗಿತ್ತು. ಅಂತಿಮ ದರ್ಶನದ ಬಳಿಕ ಸಂಪ್ರದಾಯದಂತೆ ಹೀರಾಬೆನ್ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಹೀರಾಬೆನ್ ಅವರ ಪಾರ್ಥೀವ ಶರೀರಕ್ಕೆ ಪ್ರಧಾನಿ ಮೋದಿ ಸಹಿತ ಮೋದಿ ಸಹೋದರರು ಅಗ್ನಿಸ್ಪರ್ಶ ಮಾಡಿದ್ದಾರೆ. ಶತಾಯುಷಿ ಹೀರಾಬೆನ್ ಅವರು ಐವರು ಪುತ್ರರು ಓರ್ವ ಪುತ್ರಿಯನ್ನು ಅಗಲಿದ್ದಾರೆ.
0 comments:
Post a Comment