ಮತದಾರರ ಪಟ್ಟಿ ಪರಿಷ್ಕರಣೆ ವಿಶೇಷ ಆಂದೋಲನ ಪ್ರಗತಿಯಲ್ಲಿ, ಜನವರಿ 5ಕ್ಕೆ ಮತದಾರರ ಅಂತಿಮ ಪಟ್ಟಿ ಬಿಡುಗಡೆ : ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ - Karavali Times ಮತದಾರರ ಪಟ್ಟಿ ಪರಿಷ್ಕರಣೆ ವಿಶೇಷ ಆಂದೋಲನ ಪ್ರಗತಿಯಲ್ಲಿ, ಜನವರಿ 5ಕ್ಕೆ ಮತದಾರರ ಅಂತಿಮ ಪಟ್ಟಿ ಬಿಡುಗಡೆ : ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ - Karavali Times

728x90

1 December 2022

ಮತದಾರರ ಪಟ್ಟಿ ಪರಿಷ್ಕರಣೆ ವಿಶೇಷ ಆಂದೋಲನ ಪ್ರಗತಿಯಲ್ಲಿ, ಜನವರಿ 5ಕ್ಕೆ ಮತದಾರರ ಅಂತಿಮ ಪಟ್ಟಿ ಬಿಡುಗಡೆ : ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ

ಬೆಂಗಳೂರು, ಡಿಸೆಂಬರ್ 01, 2022 (ಕರಾವಳಿ ಟೈಮ್ಸ್) : ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ವಿಶೇಷ ಆಂದೋಲನ ಪ್ರಗತಿಯಲ್ಲಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾ ಕಚೇರಿ (ಸಿಇಒ) ಕಚೇರಿ ತಿಳಿಸಿದೆ.

ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು, ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಈ ವಿಶೇಷ ಆಂದೋಲನವನ್ನು ನಡೆಸಲಾಗುತ್ತಿದೆ. ಎಲ್ಲಾ 224 ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪಟ್ಟಿಯು ಜಿಲ್ಲಾಧಿಕಾರಿಗಳು, ಚುನಾವಣಾ ನೋಂದಣಿ ಅಧಿಕಾರಿಗಳು, ಸಹಾಯಕ ಮತದಾರರ ಪಟ್ಟಿ ನೋಂದಣಿ ಅಧಿಕಾರಿಗಳು ಮತ್ತು ಎಲ್ಲಾ ಜಿಲ್ಲೆಗಳ ವ್ಯಾಪ್ತಿಯಲ್ಲಿರುವ ಎಲ್ಲಾ ಮತಗಟ್ಟೆಗಳಲ್ಲಿ ಲಭ್ಯವಿರುತ್ತದೆ ಎಂದು ಹೇಳಿದರು.



ಆಕ್ಷೇಪಣೆಗಳು ಮತ್ತು ಹಕ್ಕುಗಳನ್ನು ಸ್ವೀಕರಿಸಿದ ನಂತರ, ಅಂತಿಮ ಮತದಾರರ ಪಟ್ಟಿಯನ್ನು ಜನವರಿ 5, 2023 ರಂದು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಕ್ರಿಯೆಯು ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ, ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರದ ಹಕ್ಕು ಮತ್ತು ಆಕ್ಷೇಪಣೆಗಳ ಸಲ್ಲಿಕೆಗೆ ಅವಧಿ ನೀಡಲಾಗಿದೆ. 24 ಡಿಸೆಂಬರ್ 2022ರವರೆಗೆ ಅವಧಿ ವಿಸ್ತರಿಸಲಾಗಿದೆ ಮತ್ತು ಈ ಮೂರು ಕ್ಷೇತ್ರಗಳ ಪರಿಷ್ಕೃತ ಮತದಾರರ ಪಟ್ಟಿಯನ್ನು ನಂತರ ಒದಗಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಮತದಾರರ ಪಟ್ಟಿ ಪರಿಷ್ಕರಣೆ ವಿಶೇಷ ಆಂದೋಲನ ಪ್ರಗತಿಯಲ್ಲಿ, ಜನವರಿ 5ಕ್ಕೆ ಮತದಾರರ ಅಂತಿಮ ಪಟ್ಟಿ ಬಿಡುಗಡೆ : ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ Rating: 5 Reviewed By: karavali Times
Scroll to Top