ಬೆಳ್ತಂಗಡಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ : ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಮಂಗಳೂರು ನ್ಯಾಯಾಲಯ ತೀರ್ಪು - Karavali Times ಬೆಳ್ತಂಗಡಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ : ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಮಂಗಳೂರು ನ್ಯಾಯಾಲಯ ತೀರ್ಪು - Karavali Times

728x90

25 January 2023

ಬೆಳ್ತಂಗಡಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ : ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಮಂಗಳೂರು ನ್ಯಾಯಾಲಯ ತೀರ್ಪು

ಬೆಳ್ತಂಗಡಿ, ಜನವರಿ 25, 2023 (ಕರಾವಳಿ ಟೈಮ್ಸ್) : ತಾಲೂಕಿನ ಕಡಿರುದ್ಯಾವರ ಗ್ರಾಮದ ಎರ್ಮಳ ಪಲ್ಕೆ-ಮಠ ಎಂಬಲ್ಲಿ 2021 ರ ಡಿಸೆಂಬರ್ 19 ಹಾಗೂ 2022 ರ ಫೆಬ್ರವರಿ 26 ರ ಮಧ್ಯೆ ಅಪ್ರಾಪ್ತ ಬಾಲಕಿಯ ಇಚ್ಚೆಗೆ ವಿರುದ್ದವಾಗಿ ಹಲವು ಬಾರಿ ಲೈಂಗಿಕ ಸಂಪರ್ಕ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಅಪರಾಧ ಸಾಬೀತಾಗಿರುವ ಹಿನ್ನಲೆಯಲ್ಲಿ ಆತನಿಗೆ ನ್ಯಾಯಾಲಯ 20 ವರ್ಷಗಳ ಕಾರಾಗೃಹ ಹಾಗೂ 50 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ದಂಡ ಕಟ್ಟಲು ತಪ್ಪಿದಲ್ಲಿ 6 ತಿಂಗಳ ಕಠಿಣ ಕಾರಾಗೃಹ ವಾಸ ಅನುಭವಿಸುವಂತೆ ಸೂಚಿಸಲಾಗಿದೆ. 


ಆರೋಪ ಸಾಬೀತಾದ ಅಪರಾಧಿಯನ್ನು ಬೆಳ್ತಂಗಡಿ ತಾಲೂಕು, ಕಡಿರುದ್ಯಾವರ ಗ್ರಾಮದ ಎರ್ಮಾಳಪಲ್ಕೆ-ಕೊಂಬರೋಡಿ ನಿವಾಸಿ ಐತಪ್ಪ ನಲಿಕೆ ಎಂಬವರ ಪುತ್ರ ಬಾಬಿ (48) ಎಂದು ಹೆಸರಿಸಲಾಗಿದೆ. 


ಬೆಳ್ತಂಗಡಿಯ ಎರ್ಮಳಪಲ್ಕೆ ಎಂಬಲ್ಲಿ ಆರೋಪಿಯು ಬಾಲಕಿಯ ಇಚ್ಚೆಗೆ ವಿರುದ್ದವಾಗಿ ಅನೇಕ ಲೈಂಗಿಕ ಸಂಪರ್ಕ ನಡೆಸಿದ್ದು, ಈ ಬಗ್ಗೆ 2022 ರ ಮಾರ್ಚ್ 3 ರಂದು ಬಾಲಕಿ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು, ಆತನ ವಿರುದ್ದ ಬೆಳ್ತಂಗಡಿ ಪಿಎಸೈ ಆಗಿದ್ದ ನಂದಕುಮಾರ್ ಅವರು ಠಾಣಾ ಅಪರಾಧ ಕ್ರಮಾಂಕ 15/2022 ಕಲಂ 4 ಹಾಗೂ 6 ಪೋಕ್ಸೋ ಕಾಯ್ದೆ ಹಾಗೂ ಕಲಂ 376 ಐಪಿಸಿಯಂತೆ ಪ್ರಕರಣ ದಾಖಲಿಸಿಕೊಂಡಿದ್ದರು. 

ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರ್ ಬಿ ಅವರು ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ತನಿಖೆ ನಡೆಸಿ ಆರೋಪಿಯ ವಿರುದ್ದ ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್ ಟಿ ಎಸ್ ಸಿ -2 (ಪೋಕ್ಸೋ) ನ್ಯಾಯಾಲಯದ ನ್ಯಾಯಾಧೀಶ ರಾಧಾಕೃಷ್ಣ ಅವರು ಜನವರಿ 24 ರಂದು ಬುಧವಾರ ತೀರ್ಪು ಪ್ರಕಟಿಸಿ ಆರೋಪಿಯ ವಿರುದ್ದ ಕಠಿಣ ಶಿಕ್ಷೆ ವಿಧಿಸಿ ತೀರ್ಪಿತ್ತಿದ್ದಾರೆ. ಸರಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ವೆಂಕಟರಮಣ ಸ್ವಾಮಿ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದಾರೆ. 


  • Blogger Comments
  • Facebook Comments

0 comments:

Post a Comment

Item Reviewed: ಬೆಳ್ತಂಗಡಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ : ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಮಂಗಳೂರು ನ್ಯಾಯಾಲಯ ತೀರ್ಪು Rating: 5 Reviewed By: karavali Times
Scroll to Top