ಬೆಂಗಳೂರು, ಜನವರಿ 19, 2023 (ಕರಾವಳಿ ಟೈಮ್ಸ್) : ಈ ಬಾರಿಯ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಬುಧವಾರ (ಜ 18) ಪ್ರಕಟಿಸಿದೆ.
2023 ರ ಮಾರ್ಚ್ 31 ರಿಂದ ಎಪ್ರಿಲ್ 15 ರವರೆಗೆ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಳಿಯ ಅಧಿಕೃತ ವೆಬ್‌ತಾಣದಲ್ಲಿ ಪ್ರಕಟಿಸಲಾಗಿದೆ.
ಎಪ್ರಿಲ್ 4 ರಂದು ನಡೆಯಬೇಕಿದ್ದ ಗಣಿತ ಮತ್ತು ಸಮಾಜ ಶಾಸ್ತ್ರ ಪರೀಕ್ಷೆಗಳು ಬದಲಾಗಿದ್ದು, ಎಪ್ರಿಲ್ 3 ರಂದು ನಡೆಯಲಿವೆ. ಎಪ್ರಿಲ್ 4 ರಂದು ಮಹಾವೀರ ಜಯಂತಿ ಹಿನ್ನೆಲೆಯಲ್ಲಿ ಸರ್ಕಾರಿ ರಜೆ ಇರುವುದರಿಂದ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ.
ಪರಿಷ್ಕೃತ ವೇಳಾಪಟ್ಟಿ ಈ ರೀತಿ ಇದೆ :
ಮಾರ್ಚ್ 31 ರಂದು ಮೊದಲ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ ಪರೀಕ್ಷೆಗಳು ನಡೆಯಲಿವೆ, ಎಪ್ರಿಲ್ 3 ರಂದು ಗಣಿತ, ಸಮಾಜ ಶಾಸ್ತ್ರ, ಎಪ್ರಿಲ್ 6 ರಂದು ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ, ಎಪ್ರಿಲ್ 8 ರಂದು ಅರ್ಥಶಾಸ್ತ್ರ, ಎಪ್ರಿಲ್ 10 ರಂದು ವಿಜ್ಞಾನ, ರಾಜ್ಯಶಾಸ್ತ್ರ, ಎಪ್ರಿಲ್ 12 ರಂದು ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲಿಷ್ ಹಾಗೂ ಎಪ್ರಿಲ್ 15 ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿದೆ ಎಂದು ಬೋರ್ಡ್ ಪ್ರಕಟಣೆ ತಿಳಿಸಿದೆ.
0 comments:
Post a Comment