ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಅತ್ಯಂತ ಮಹತ್ವವಾದುದು ನ್ಯಾಯಾಧೀಶ ಚಂದ್ರಶೇಖರ ತಳವಾರ - Karavali Times ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಅತ್ಯಂತ ಮಹತ್ವವಾದುದು ನ್ಯಾಯಾಧೀಶ ಚಂದ್ರಶೇಖರ ತಳವಾರ - Karavali Times

728x90

27 January 2023

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಅತ್ಯಂತ ಮಹತ್ವವಾದುದು ನ್ಯಾಯಾಧೀಶ ಚಂದ್ರಶೇಖರ ತಳವಾರ

ಬಂಟ್ವಾಳ ಎಸ್.ವಿ.ಎಸ್. ಕಾಲೇಜಿನಲ್ಲಿ ರಾಷ್ಟೀಯ ಮತದಾರರ ದಿನಾಚರಣೆ ಕಾರ್ಯಕ್ರಮ 


ಬಂಟ್ವಾಳ, ಜನವರಿ 27, 2023 (ಕರಾವಳಿ ಟೈಮ್ಸ್) : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಅತ್ಯಂತ ಮಹತ್ವವಾದುದು ಎಂದು ಬಂಟ್ವಾಳ ಜೆ ಎಂ ಎಂ ಎಫ್ ಸಿ ಪ್ರಧಾನ ಸಿವಿಲ್ ನ್ಯಾಯಾಧೀಶ ಚಂದ್ರಶೇಖರ ವೈ ತಳವಾರ ಹೇಳಿದರು. 


ಮತದಾರ ಸಾಕ್ಷಾರತಾ ಸಂಘ, ಎನ್ ಎಸ್ ಎಸ್ ಘಟಕ, ಎಸ್ ವಿ ಎಸ್ ಕಾಲೇಜು ಬಂಟ್ವಾಳ, ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ಬಂಟ್ವಾಳ ವಕೀಲರ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ಎಸ್ ವಿ ಎಸ್ ಕಾಲೇಜಿನಲ್ಲಿ ಆಯೋಜಿಸಲಾದ ರಾಷ್ಟೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪಾರದರ್ಶಕ ಆಡಳಿತ ವ್ಯವಸ್ಥೆ ರೂಪಿಸಲು ಸಂವಿಧಾನವು ನಮಗೆ ಅತ್ಯಮೂಲ್ಯವಾದ ಮತದಾನದ ಹಕ್ಕು ನೀಡಿದೆ. 18ವರ್ಷ ತುಂಬಿದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದವರು ಹೇಳಿದರು. 


ಸಂಪನ್ಮೂಲ ವ್ಯಕ್ತಿ ಶಿವಪ್ರಕಾಶ್ ಮಾತನಾಡಿ, ಪ್ರಪಂಚದ ಹಲವಾರು ದೇಶಗಳಲ್ಲಿ ಮತದಾನದ ಹಕ್ಕನ್ನು ಪಡೆಯಲು ಕೆಲವು ನಿಬಂಧನೆಗಳಿದ್ಧು, ಭಾರತವು ಈ ಪಟ್ಟಿಯಲ್ಲಿ ಅತ್ಯಂತ ವಿಶಿಷ್ಟವಾದ ಸ್ಥಾನದಲ್ಲಿ ಗುರುತಿಸಿಕೊಂಡಿದೆ. ಪ್ರಜಾಪ್ರಭುತ್ವದಲ್ಲಿ ಮತದಾನ ಎಂಬುವುದು ಪ್ರಜೆಗಳಿಗಿರುವ ಅತ್ಯಂತ ಪ್ರಬಲವಾದ ಅಸ್ತ್ರ. ತಮ್ಮ ನಾಯಕನನ್ನು ತಾವೇ ಆಯ್ಕೆ ಮಾಡಿಕೊಳ್ಳುವ ಒಂದು ಅಪರೂಪದ ಅವಕಾಶವನ್ನು ಮತದಾನ ನೀಡುತ್ತದೆ. ಪ್ರತಿಯೊಬ್ಬನೂ ಕೂಡ ಮತದಾನದ ಗುರುತಿನ ಚೀಟಿ ಹೊಂದಿರಬೇಕು ಎಂದರು. 

ಎಸ್ ವಿ ಎಸ್ ಸಮೂಹ ವಿದ್ಯಾ ಸಂಸ್ಥೆಗಳ ಸಂಚಾಲಕಿ ಕೆ ರೇಖಾ ಶೆಣೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಂಟ್ವಾಳ ಜೆ ಎಂ ಎಫ್ ಸಿ ನ್ಯಾಯಾಲಯದ ಮೋಹನ್ ಪ್ರಭು ಕೆ, ಹರಿಣಿ ಕುಮಾರಿ, ಎಸ್ ವಿ ಎಸ್ ಕಾಲೇಜು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. 

ಕಾಲೇಜು ಪ್ರಾಂಶುಪಾಲ ಡಾ ಸುಯೋಗ ವರ್ಧನ್ ಡಿ ಎಂ ಪ್ರಸ್ತಾವನೆಗೈದು, ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಮತದಾರರ ಸಾಕ್ಷಾರತಾ ಯೋಜನೆಯ ಕಾಲೇಜಿನ ನೋಡಲ್ ಅಧಿಕಾರಿ ಡಾ ವಿನಾಯಕ ಕೆ ಎಸ್ ಸ್ವಾಗತಿಸಿ, ಡಾ ಕಾಶೀನಾಥ ಶಾಸ್ತ್ರಿ ಎಚ್ ವಿ ವಂದಿಸಿದರು. ಕಿಟ್ಟು ಕೆ ಕಾರ್ಯಕ್ರಮ ನಿರೂಪಿಸಿದರು. 

  • Blogger Comments
  • Facebook Comments

0 comments:

Post a Comment

Item Reviewed: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಅತ್ಯಂತ ಮಹತ್ವವಾದುದು ನ್ಯಾಯಾಧೀಶ ಚಂದ್ರಶೇಖರ ತಳವಾರ Rating: 5 Reviewed By: karavali Times
Scroll to Top