ಬಂಟ್ವಾಳ, ಫೆಬ್ರವರಿ 22, 2023 (ಕರಾವಳಿ ಟೈಮ್ಸ್) : ತಾಲೂಕಿನ ಶಂಭೂರು ಗ್ರಾಮದ ಕಾಪಿಕಾಡು ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಪರವಾನಿಗೆ ಇಲ್ಲದೆ ಮದ್ಯ ಸೇವೆ ಮಾಡುತ್ತಿದ್ದ ಸ್ಥಳೀಯ ನಿವಾಸಿ ರವಿಚಂದ್ರ ಆಚಾರಿ ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಮದ್ಯದ ಬಾಟಲಿ ಸಹಿತ ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಟ್ವಾಳ ಗ್ರಾಮಾಂತರ ಠಾಣಾ ಪಿಎಸೈ ಉದಯ ರವಿ ನೇತೃತ್ವದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಈ ಬಗ್ಗೆ ಠಾಣಾ ಅಪರಾಧ ಕ್ರಮಾಂಕ 16/2023 ಕಲಂ 15(ಎ), 32(3) ಕರ್ನಾಟಕ ಅಬಕಾರಿ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.
0 comments:
Post a Comment