ಫೆಬ್ರವರಿ 25-26 : ಪಾಣೆಮಂಗಳೂರು-ಆಲಡ್ಕದಲ್ಲಿ ಕಾಂಗ್ರೆಸ್ ಟ್ರೋಫಿ ಕ್ರಿಕೆಟ್ ಪಂದ್ಯಾಟ ಹಾಗೂ ಬೃಹತ್ ಕಾಂಗ್ರೆಸ್ ಸಮಾವೇಶ - Karavali Times ಫೆಬ್ರವರಿ 25-26 : ಪಾಣೆಮಂಗಳೂರು-ಆಲಡ್ಕದಲ್ಲಿ ಕಾಂಗ್ರೆಸ್ ಟ್ರೋಫಿ ಕ್ರಿಕೆಟ್ ಪಂದ್ಯಾಟ ಹಾಗೂ ಬೃಹತ್ ಕಾಂಗ್ರೆಸ್ ಸಮಾವೇಶ - Karavali Times

728x90

21 February 2023

ಫೆಬ್ರವರಿ 25-26 : ಪಾಣೆಮಂಗಳೂರು-ಆಲಡ್ಕದಲ್ಲಿ ಕಾಂಗ್ರೆಸ್ ಟ್ರೋಫಿ ಕ್ರಿಕೆಟ್ ಪಂದ್ಯಾಟ ಹಾಗೂ ಬೃಹತ್ ಕಾಂಗ್ರೆಸ್ ಸಮಾವೇಶ

26 ರಂದು ಸಂಜೆ ಹೊನಲು ಬೆಳಕಿನ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ


ಬಂಟ್ವಾಳ, ಫೆಬ್ರವರಿ 22, 2023 (ಕರಾವಳಿ ಟೈಮ್ಸ್) : ಭೂಯಾ ಸ್ಪೋಟ್ರ್ಸ್ ಕ್ಲಬ್ ಆಲಡ್ಕ-ಪಾಣೆಮಂಗಳೂರು ಇದರ ಆಶ್ರಯದಲ್ಲಿ ಹಾಗೂ ರಮಾನಾಥ ರೈ ಅಭಿಮಾನಿಗಳ ಬಳಗ ಬಂಟ್ವಾಳ ವಿಧಾನಸಭಾ ಕ್ಷೇತ್ರ ಇದರ ಸಹಯೋಗದಲ್ಲಿ ಆಹ್ವಾನಿತ 16 ತಂಡಗಳ ನಿಗದಿತ ಓವರ್‍ಗಳ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ “ಕಾಂಗ್ರೆಸ್ ಟ್ರೋಫಿ-2023” ಹಾಗೂ ಬೃಹತ್ “ಕಾಂಗ್ರೆಸ್ ಸಮಾವೇಶ”ವು ಫೆಬ್ರವರಿ 25 ಶನಿವಾರ ಹಾಗೂ 26 ಭಾನುವಾರ ಆಲಡ್ಕ ಮೈದಾನದಲ್ಲಿ ನಡೆಯಲಿದೆ. 

ಫೆಬ್ರವರಿ 26 ರಂದು ಅಪರಾಹ್ನ 3 ಗಂಟೆಗೆ ಬೃಹತ್ ಕಾಂಗ್ರೆಸ್ ಸಮಾವೇಶ ನಡೆಯಲಿದ್ದು, ಮಾಜಿ ಸಚಿವ ಬಿ ರಮಾನಾಥ ರೈ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು, ಮುಂಚೂಣಿ ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು, ಉದ್ಯಮಿಗಳು, ವಿವಿಧ ಕ್ಷೇತ್ರದ ಗಣ್ಯರು, ಕ್ರಿಕೆಟ್ ಪ್ರೋತ್ಸಾಹಕರು, ಸಂಘಟಕರು ಮೊದಲಾದವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 

ಕ್ರಿಕೆಟ್ ಕೂಟದಲ್ಲಿ ವಿಜೇತ ತಂಡಗಳಿಗೆ ಪ್ರಥಮ ಹಾಗೂ ದ್ವಿತೀಯ ಬಹುಮಾನಗಳು ಹಾಗೂ ಕಾಂಗ್ರೆಸ್ ಟ್ರೋಫಿ ನೀಡಿ ಗೌರವಿಸಲಾಗುವುದು. ಅಲ್ಲದೆ ಪಂದ್ಯಶ್ರೇಷ್ಠ, ಸರಣಿ ಶ್ರೇಷ್ಠ, ಉತ್ತಮ ದಾಂಡುಗಾರ, ಉತ್ತಮ ದಾಳಿಗಾರ ಮೊದಲಾದ ವೈಯುಕ್ತಿಕ ಪ್ರಶಸ್ತಿಗಳನ್ನು ನೀಡಿ ಪುರಸ್ಕರಿಸಲಾಗುವುದು.

ಅದೇ ದಿನ ಸಂಜೆಯ ಬಳಿಕ ಲೀಗ್ ಮಾದರಿಯ “ಪಾಣೆಮಂಗಳೂರು ಪ್ರೀಮಿಯರ್ ಲೀಗ್ ಪಿಪಿಎಲ್ ಸೀಸನ್-1” ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ  ಹಾಗೂ ಮಾರ್ಚ್ 5 ಹಾಗೂ 19 ರಂದು ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಆಲಡ್ಕ ಪ್ರೀಮಿಯರ್ ಲೀಗ್ ಸೀಸನ್-7 ನಡೆಯಲಿದೆ ಎಂದು ಭೂಯಾ ಸ್ಪೋಟ್ಸ್ ಕ್ಲಬ್ ಅಧ್ಯಕ್ಷ, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶರೀಫ್ ಭೂಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಫೆಬ್ರವರಿ 25-26 : ಪಾಣೆಮಂಗಳೂರು-ಆಲಡ್ಕದಲ್ಲಿ ಕಾಂಗ್ರೆಸ್ ಟ್ರೋಫಿ ಕ್ರಿಕೆಟ್ ಪಂದ್ಯಾಟ ಹಾಗೂ ಬೃಹತ್ ಕಾಂಗ್ರೆಸ್ ಸಮಾವೇಶ Rating: 5 Reviewed By: karavali Times
Scroll to Top