ರಾತ್ರಿ ಗಸ್ತು ವೇಳೆ ಅಪರಾಧ ನಿಯಂತ್ರಣಕ್ಕೆ ಪೊಲೀಸರಿಂದ ಬೆರಳಚ್ಚು ಪರಿಶೀಲನೆ ನೂತನ ಕ್ರಮ - Karavali Times ರಾತ್ರಿ ಗಸ್ತು ವೇಳೆ ಅಪರಾಧ ನಿಯಂತ್ರಣಕ್ಕೆ ಪೊಲೀಸರಿಂದ ಬೆರಳಚ್ಚು ಪರಿಶೀಲನೆ ನೂತನ ಕ್ರಮ - Karavali Times

728x90

19 February 2023

ರಾತ್ರಿ ಗಸ್ತು ವೇಳೆ ಅಪರಾಧ ನಿಯಂತ್ರಣಕ್ಕೆ ಪೊಲೀಸರಿಂದ ಬೆರಳಚ್ಚು ಪರಿಶೀಲನೆ ನೂತನ ಕ್ರಮ

ಮಂಗಳೂರು, ಫೆಬ್ರವರಿ 19, 2023 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ಜರುಗಬಹುದಾದ ಅಪರಾಧ ಕೃತ್ಯಗಳನ್ನು ತಡೆಗಟ್ಟುವ ಹಾಗೂ ಅಪರಾಧಿಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ನೂತನ ಎಂ ಸಿ ಸಿ ಟಿ ಎನ್ ಎಸ್ (ಮೊಬೈಲ್ ಕ್ರೈಂ ಆಂಡ್ ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್‍ವರ್ಕ್ ಸಿಸ್ಟಂ) ಪೊರ್ಟಬಲ್ ಸ್ಕ್ಯಾನರ್ ಬಳಕೆಯನ್ನು ಪರಿಣಾಮ ಕಾರಿಯಾಗಿ ಜಾರಿಗೆ ತರಲಾಗಿದೆ.

ಇದರ  ಮೂಲಕ  ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳ  ಅಧಿಕಾರಿ/ ಸಿಬ್ಬಂದಿಗಳು ರಾತ್ರಿ ಗಸ್ತು ಕರ್ತವ್ಯದ ವೇಳೆಯಲ್ಲಿ  ಕಾಣಸಿಗುವ ಅಪರಿಚಿತ ಹಾಗೂ ಸಂಶಯಾಸ್ಪದ ವ್ಯಕ್ತಿಗಳ ಅಪರಾಧ ಹಿನ್ನೆಲೆಗಳ ಬಗ್ಗೆ ಈ ಹಿಂದೆ ನಡೆಸುತ್ತಿದ್ದ ಮೌಖಿಕ ವಿಚಾರಣೆಯ ಜೊತೆಗೆ ಈ ನೂತನ ತಂತ್ರಜ್ಞಾನದಲ್ಲಿ ಯಾವುದೇ ವ್ಯಕ್ತಿಯು ಈ ಹಿಂದೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರೆ, ಆತನ ಬೆರಳಚ್ಚುಗಳನ್ನು ಸದರಿ ತಂತ್ರಾಂಶದ ಮೂಲಕ ಪರಿಶೀಲಿಸಿದಾಗ ಆತನ ಅಪರಾಧ ಹಿನ್ನೆಲೆಗಳ ಮಾಹಿತಿ ಕ್ಷಣ ಮಾತ್ರದಲ್ಲಿ ಅದೇ ಸ್ಥಳದಲ್ಲಿ ಪಡೆಯಬಹುದಾಗಿದೆ.

ಇಂತಹ ನೂತನ ತಂತ್ರಜ್ಞಾನವನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಬಳಸುತ್ತಿರುವುದರಿಂದ  ಅಪರಾಧ ಹಿನ್ನೆಲೆಯ ವ್ಯಕ್ತಿಗಳನ್ನು ತಕ್ಷಣ ಪತ್ತೆ ಹಚ್ಚಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಪ್ರಕ್ರಿಯೆಗೆ ಇಲಾಖೆಯೊಂದಿಗೆ ಸಹಕರಿಸುವಂತೆ ಪೊಲೀಸ್ ಅಧಿಕಾರಿಗಳು ಕೋರಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ರಾತ್ರಿ ಗಸ್ತು ವೇಳೆ ಅಪರಾಧ ನಿಯಂತ್ರಣಕ್ಕೆ ಪೊಲೀಸರಿಂದ ಬೆರಳಚ್ಚು ಪರಿಶೀಲನೆ ನೂತನ ಕ್ರಮ Rating: 5 Reviewed By: karavali Times
Scroll to Top