ಉಜಿರೆ : ಅನೈತಿಕ ಹಾಗೂ ಕಾನೂನು ಬಾಹಿರ ಚಟುವಟಿಕೆಗಳ ಮಾಹಿತಿ ಮೇರೆಗೆ ಲಾಡ್ಜ್ ಗಳ ಮೇಲೆ ಪೊಲೀಸ್ ದಾಳಿ - Karavali Times ಉಜಿರೆ : ಅನೈತಿಕ ಹಾಗೂ ಕಾನೂನು ಬಾಹಿರ ಚಟುವಟಿಕೆಗಳ ಮಾಹಿತಿ ಮೇರೆಗೆ ಲಾಡ್ಜ್ ಗಳ ಮೇಲೆ ಪೊಲೀಸ್ ದಾಳಿ - Karavali Times

728x90

6 February 2023

ಉಜಿರೆ : ಅನೈತಿಕ ಹಾಗೂ ಕಾನೂನು ಬಾಹಿರ ಚಟುವಟಿಕೆಗಳ ಮಾಹಿತಿ ಮೇರೆಗೆ ಲಾಡ್ಜ್ ಗಳ ಮೇಲೆ ಪೊಲೀಸ್ ದಾಳಿ

ಬೆಳ್ತಂಗಡಿ, ಫೆಬ್ರವರಿ 07, 2023 (ಕರಾವಳಿ ಟೈಮ್ಸ್) : ತಾಲೂಕಿನ ಉಜಿರೆ ಪರಿಸರದ ಕೆಲವು ಲಾಡ್ಜ್ ಗಳಲ್ಲಿ ಅನೈತಿಕ ಹಾಗೂ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂಬ ಮಾಹಿತಿ ಮೇರೆಗೆ ಬಂಟ್ವಾಳ ಉಪ ವಿಭಾಗದ  ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನೊಳಗೊಂಡ 5 ವಿಶೇಷ ತಂಡ ರಚಿಸಿ, ಬಂಟ್ವಾಳ ಪೆÇಲೀಸ್ ಉಪ ವಿಭಾಗದ ಡಿವೈಎಸ್ಪಿ ಪ್ರತಾಪ್ ಸಿಂಗ್ ಥೋರಾಟ್ ಅವರ ನೇತೃತ್ವದಲ್ಲಿ ಏಕ ಕಾಲದಲ್ಲಿ ಉಜಿರೆ ಪರಿಸರದ ಎಲ್ಲಾ ಲಾಡ್ಜ್ ಗಳ ಮೇಲೆ ಸೋಮವಾರ ದಾಳಿ ನಡೆಸಿ ಸಿಸಿ ಟಿವಿಗಳನ್ನು, ದಾಖಲಾತಿ ಪುಸ್ತಕ (ರಿಜಿಸ್ಟರ್) ಗಳನ್ನು ಪರಿಶೀಲನೆ ನಡೆಸಲಾಯಿತು. 

ಈ ವೇಳೆ ಲಾಡ್ಜ್ ಮಾಲೀಕರುಗಳಿಗೆ ಮುಂದಿನ ದಿನಗಳಲ್ಲಿ ಲಾಡ್ಜ್ ನಲ್ಲಿರುವ ಎಲ್ಲಾ ಸಿಸಿ ಟಿವಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಲು ಹಾಗೂ  ಲಾಡ್ಜ್ ನಲ್ಲಿ ತಂಗುವ ಪ್ರವಾಸಿಗರು ಮತ್ತು ಭಕ್ತಾದಿಗಳಿಂದ ಗುರುತಿನ ಚೀಟಿಗಳನ್ನು  ಪಡೆದು ರಿಜಿಸ್ಟ್ರರ್ ಪುಸ್ತಕಗಳಲ್ಲಿ ಸರಿಯಾಗಿ ದಾಖಲಿಸುವುದು. ಯಾವುದೇ ಅನೈತಿಕ ಹಾಗೂ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡದೆ, ಅಂತಹ ಕೃತ್ಯಗಳು ಲಾಡ್ಜ್ ಪರಿಸರಗಳಲ್ಲಿ ಕಂಡು ಬಂದಲ್ಲಿ ತಕ್ಷಣ ಸ್ಥಳೀಯ ಪೆÇಲೀಸ್ ಠಾಣೆಗೆ ಮಾಹಿತಿ ನೀಡುವುದು, ಲಾಡ್ಜ್ ಗಳ ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ  ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಯಿತು. 

ಯಾವುದೇ £ಯಮಾವಳಿಗಳ ಉಲ್ಲಂಘನೆ ಕಂಡುಬಂದಲ್ಲಿ ಅಂತಹ ಲಾಡ್ಜ್ ಗಳ ಪರವಾನಿಗೆಯನ್ನು ರದ್ದುಪಡಿಸಲು ಸಂಬಂಧಪಟ್ಟ ಇಲಾಖೆಗಳಿಗೆ ವರದಿ ನೀಡಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು. ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳ ಕುರಿತು ಮಾಹಿತಿ ಬಂದಲ್ಲಿ ಮುಂದಿನ ದಿನಗಳಲ್ಲಿಯೂ ಈ ರೀತಿಯ ಅನಿರೀಕ್ಷಿತ ದಾಳಿಗಳನ್ನು ನಡೆಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಎಚ್ಚರಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಉಜಿರೆ : ಅನೈತಿಕ ಹಾಗೂ ಕಾನೂನು ಬಾಹಿರ ಚಟುವಟಿಕೆಗಳ ಮಾಹಿತಿ ಮೇರೆಗೆ ಲಾಡ್ಜ್ ಗಳ ಮೇಲೆ ಪೊಲೀಸ್ ದಾಳಿ Rating: 5 Reviewed By: karavali Times
Scroll to Top