ಬಂಟ್ವಾಳ, ಮಾರ್ಚ್ 09, 2023 (ಕರಾವಳಿ ಟೈಮ್ಸ್) : ದ್ವಿಚಕ್ರ ವಾಹನದಲ್ಲಿ ಅಕ್ರಮ ಮದ್ಯದ ಪ್ಯಾಕೆಟ್ ಗಳನ್ನು ಮನೆ ಬಳಿ ಮಾರಾಟಕ್ಕೆಂದು ಸಾಗಾಟ ಮಾಡುತ್ತಿದ್ದ ವೇಳೆ ಕಾರ್ಯಾಚರಣೇ ನಡೆಸಿದ ಬಂಟ್ವಾಳ ನಗರ ಪೊಲೀಸರು ಆರೋಪಿ ಸಹಿತ ಮದ್ಯವನ್ನು ವಶಪಡಿಸಿಕೊಂಡ ಘಟನೆ ಬುಧವಾರ ನಲ್ಕೆಮಾರ್ ಎಂಬಲ್ಲಿ ನಡೆದಿದೆ.
ಅಕ್ರಮ ಮದ್ಯ ಸಾಗಾಟ ನಡೆಸುತ್ತಿದ್ದ ಆರೋಪಿಯನ್ನು ಕಳ್ಳಿಗೆ ಗ್ರಾಮದ ಕಲ್ಪನೆ ನಿವಾಸಿ ದಿವಂಗತ ಫೆಡ್ರಿಕ್ ರೋಡ್ರಿಗಸ್ ಎಂಬವರ ಪುತ್ರ ಮೆಲ್ವಿನ್ ರೋಡ್ರಿಗಸ್ (40) ಎಂದು ಹೆಸರಿಸಲಾಗಿದೆ. ಬಂಟ್ವಾಳ ನಗರ ಪಿಎಸ್ಸೈ ರಾಮಕೃಷ್ಣ ಅವರು ಸಿಬ್ಬಂದಿಗಳ ಜೊತೆ ರೌಂಡ್ಸ್ ನಲ್ಲಿರುವ ವೇಳೆ ಕಾರ್ಯಾಚರಣೆ ನಡೆಸಿದ್ದಾರೆ. ನಲ್ಕೆಮಾರ್ ಎಂಬಲ್ಲಿ ವಾಹನ ತಪಾಸಣೆ ಮಾಡುವ ಉದ್ದೇಶದಿಂದ ಮೆಲ್ವಿನ್ ಅವರ ಸ್ಕೂಟರನ್ನು ನಿಲ್ಲಿಸಲು ಪೊಲೀಸರು ಸೂಚಿಸಿದ ವೇಳೆ ಆತನ ನಿಲ್ಲಿಸದೆ ಮುಂದಕ್ಕೆ ಹೋಗಿದ್ದು ಈ ಸಂದರ್ಭ ಪೊಲೀಸರು ಹಿಡಿದು ವಿಚಾರಣೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ.
ಆರೋಪಿಯಿಂದ ಒಟ್ಟು 3,372.48/- ರೂಪಾಯಿ ಮೌಲ್ಯದ ಮದ್ಯದ ಸ್ಯಾಚೆಟ್ ಗಳನ್ನು ಹಾಗೂ ಮದ್ಯ ಸಾಗಾಟಕ್ಕೆ ಬಳಸಿದ ಸುಮಾರು 45 ಸಾವಿರ ರೂಪಾಯಿ ಮೌಲ್ಯದ ಸ್ಕೂಟರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಅಪರಾಧ ಕ್ರಮಾಂಕ 18/2023 ಕಲಂ 32, 34 ಅಬಕಾರಿ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.
0 comments:
Post a Comment