ಬಂಟ್ವಾಳ, ಮಾರ್ಚ್ 07, 2023 (ಕರಾವಳಿ ಟೈಮ್ಸ್) : ಇಲ್ಲಿನ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ ಕಸ್ಬಾ ಗ್ರಾಮದ ಬಡ್ಡಕಟ್ಟೆ ನಿವಾಸಿ ಆನಂದ ಎಂಬವರ ಪುತ್ರ ಗುರುರಾಜ್ (31) ಎಂಬಾತ ಪಾಣೆಮಂಗಳೂರು ಗ್ರಾಮದ ಮೆಲ್ಕಾರಿನ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಆಡುತ್ತಿದ್ದ ಬಗ್ಗೆ ಖಚಿತ ವರ್ತಮಾನದ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ನಗರ ಪೊಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ ನೇತೃತ್ವದ ಪೊಲೀಸರು ಆರೋಪಿ ಬಳಿ ಇದ್ದ ಮಟ್ಕಾ ಚೀಟಿ ಹಾಗೂ 2,260/- ರೂಪಾಯಿ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.
ಅದೇ ರೀತಿ ಬಿ ಕಸ್ಬಾ ಗ್ರಾಮದ ಬಡ್ಡಕಟ್ಟೆ ನಿವಾಸಿ ಮಾರಪ್ಪ ಎಂಬವರ ಪುತ್ರ ನಿಶಾಂತ್ (31) ಎಂಬಾತ ಬಿ ಮೂಡ ಗ್ರಾಮದ ಕೈಕಂಬ ಬಳಿ ಮಟ್ಕಾ ಆಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಪಿಎಸ್ಸೈ ರಾಮಕೃಷ್ಣ ನೇತೃತ್ವದ ಪೊಲೀಸರು ಮಟ್ಕಾ ಚೀಟಿ ಹಾಗೂ 2030/- ರೂಪಾಯಿ ನಗದು ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
0 comments:
Post a Comment