ಬಂಟ್ವಾಳ, ಮಾರ್ಚ್ 19, 2023 (ಕರಾವಳಿ ಟೈಮ್ಸ್) : ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ಮಾ 10 ರಂದು ಶುಕ್ರವಾರ ಚಾಲನೆಗೊಂಡ 14 ದಿನಗಳ “ಬಂಟ್ವಾಳ ಪ್ರಜಾಧ್ವನಿ” ಯಾತ್ರೆಯು 7ನೇ ದಿನವಾದ ಮಾರ್ಚ್ 20 ರಂದು ಸೋಮವಾರ ಸಜಿಪಮುನ್ನೂರು, ಸಜಿಪಮೂಡ ಹಾಗೂ ಅಮ್ಟೂರು ಗ್ರಾಮಗಳಲ್ಲಿ ಸಂಚರಿಸಲಿದ್ದು, ಸಂಜೆ ಬೊಳ್ಳಾಯಿ ಜಂಕ್ಷನ್ನಿನಲ್ಲಿ ಸಾರ್ವಜನಿಕ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಯಾತ್ರಾ ಸಂಚಾಲಕ ಪಿಯೂಸ್ ಎಲ್ ರೋಡ್ರಿಗಸ್ ತಿಳಿಸಿದ್ದಾರೆ.
ಯಾತ್ರೆಯು ಸಜಿಪಮುನ್ಜೂರು ಗ್ರಾಮದ ನಂದಾವರ ಜಂಕ್ಷನ್ನಿನಿಂದ ಸೋಮವಾರ ಬೆಳಿಗ್ಗೆ 9 ಗಂಟೆಗೆ ಆರಂಭವಾಗಲಿದ್ದು, ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಸಾರ್ವಜನಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಸಜಿಪಮುನ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ ಯೂಸುಫ್ ಕರಂದಾಡಿ ಪ್ರಕಟಣೆ ಮೂಲಕ ಕೋರಿದ್ದಾರೆ.
0 comments:
Post a Comment