ಬಂಟ್ವಾಳ, ಮಾರ್ಚ್ 17, 2023 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ 2 ಮಾದಕ ದ್ರವ್ಯ ನಿಷೇದ ಕಾಯ್ದೆ ಪ್ರಕರಣಗಳು ಗುರುವಾರ ದಾಖಲಾಗಿದೆ.
ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎನ್ ಡಿ ಪಿ ಎಸ್ ಪ್ರಕರಣ ಪತ್ತೆ ಹಚ್ಚಿದ ಪೊಲೀಸರು ಆರೋಪಿ ಪುತ್ತೂರು ತಾಲೂಕು, ಬಲ್ನಾಡು ಗ್ರಾಮದ ಅಬೂಬಕ್ಕರ್ ಎಂಬವರ ಪುತ್ರ ಇಕ್ಬಾಲ್ ಎಂಬಾತನ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯಿಂದ 40 ಸಾವಿರ ರೂಪಾಯಿ ಮೌಲ್ಯದ 1020 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲೂ ಪ್ರಕರಣ ಪತ್ತೆ ಹಚ್ಚಿದ್ದು, ಆರೋಪಿ ಅಬೂಬಕ್ಕರ್ ಸಿದ್ದೀಕ್ ಎಂಬಾತನನ್ನು ದಸ್ತಗಿರಿ ಮಾಡಿದ್ದಾರೆ, ಮತ್ತೋರ್ವ ಆರೋಪಿ ಶರ್ಫುದ್ದೀನ್ ಎಂಬಾತನ ಪೊಲೀಸರ ಕೈಗೆ ಸಿಕ್ಕಿಲ್ಲ. ಆರೋಪಿಗಳಿಂದ 29,600/- ರೂಪಾಯಿ ಮೌಲ್ಯದ 674 ಗ್ರಾಂ ಗಾಂಜಾ, ಒಂದು ಕಾರು ಹಾಗೂ ಒಂದು ಮೊಬೈಲ್ ಫೋನನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಬಕಾರಿ ಪ್ರಕರಣ ಪತ್ತೆ ಹಚ್ಚಿದ ಪೊಲೀಸರು ಆರೋಪಿ ಕಡಬ ತಾಲೂಕು, ಸುಬ್ರಹ್ಮಣ್ಯ ಗ್ರಾಮದ ಕಲ್ಲಪಣೆ ನಿವಾಸಿ ತಿಮ್ಮಪ್ಪ ಗೌಡ ಎಂಬವರ ಪುತ್ರ ಚಂದ್ರಶೇಖರ (53) ಎಂಬಾತನ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದು, ಈತನಿಂದ 1900/- ರೂಪಾಯಿ ಮೌಲ್ಯದ 4.5 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಸುಬ್ರಮಣ್ಯ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 18/2023 ಕಲಂ 32, 34 ಕೆಇ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.
0 comments:
Post a Comment