ಗುಡ್ಡೆಅಂಗಡಿ : ರೆಫ್ರಿಜರೇಶನ್ ರಿಪೇರಿ ಅಂಗಡಿಯಲ್ಲಿ ಅಗ್ನಿ ಅನಾಹುತ, ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ - Karavali Times ಗುಡ್ಡೆಅಂಗಡಿ : ರೆಫ್ರಿಜರೇಶನ್ ರಿಪೇರಿ ಅಂಗಡಿಯಲ್ಲಿ ಅಗ್ನಿ ಅನಾಹುತ, ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ - Karavali Times

728x90

5 March 2023

ಗುಡ್ಡೆಅಂಗಡಿ : ರೆಫ್ರಿಜರೇಶನ್ ರಿಪೇರಿ ಅಂಗಡಿಯಲ್ಲಿ ಅಗ್ನಿ ಅನಾಹುತ, ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

ಬಂಟ್ವಾಳ, ಮಾರ್ಚ್ 05, 2023 (ಕರಾವಳಿ ಟೈಮ್ಸ್) : ಪಾಣೆಮಂಗಳೂರು ಗ್ರಾಮದ ಮೆಲ್ಕಾರ್ ಸಮೀಪದ ಗುಡ್ಡೆಅಂಗಡಿಯಲ್ಲಿ ರೆಫ್ರಿಜರೇಟರ್ ರಿಪೇರಿ ಅಂಗಡಿಯಲ್ಲಿ ಭಾನುವಾರ ಸಂಜೆ ಆಕಸ್ಮಿಕ ಅಗ್ನಿ ಅವಘಡ ಉಂಟಾಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. 

ಬಿ ಸಿ ರೋಡು-ಪರ್ಲಿಯಾ ನಿವಾಸಿ ಫಾರೂಕ್ ಎಂಬವರಿಗೆ ಸೇರಿದ ಅಂಗಡಿಯಲ್ಲಿ ಈ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ಹೊತ್ತಿಕೊಂಡ ಬಗ್ಗೆ ತಿಳಿದು ಬರುತ್ತಲೇ ಸ್ಥಳಕ್ಕಾಗಮಿಸಿದ ಸ್ಥಳೀಯರು ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಬಂಟ್ವಾಳ ಅಗ್ನಿಶಾಮಕ ಸಿಬ್ಬಂದಿಗಳು ಪೂರ್ಣವಾಗಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಗುಡ್ಡೆಅಂಗಡಿ : ರೆಫ್ರಿಜರೇಶನ್ ರಿಪೇರಿ ಅಂಗಡಿಯಲ್ಲಿ ಅಗ್ನಿ ಅನಾಹುತ, ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ Rating: 5 Reviewed By: karavali Times
Scroll to Top