ಇಂದು (ಮಾರ್ಚ್ 25) ಯು ಟಿ ಖಾದರ್ ಸಾರಥ್ಯದ ನರಿಂಗಾನ ಲವ-ಕುಶ ಜೋಡುಕರೆ ಕಂಬಳ ಉದ್ಘಾಟನೆ - Karavali Times ಇಂದು (ಮಾರ್ಚ್ 25) ಯು ಟಿ ಖಾದರ್ ಸಾರಥ್ಯದ ನರಿಂಗಾನ ಲವ-ಕುಶ ಜೋಡುಕರೆ ಕಂಬಳ ಉದ್ಘಾಟನೆ - Karavali Times

728x90

24 March 2023

ಇಂದು (ಮಾರ್ಚ್ 25) ಯು ಟಿ ಖಾದರ್ ಸಾರಥ್ಯದ ನರಿಂಗಾನ ಲವ-ಕುಶ ಜೋಡುಕರೆ ಕಂಬಳ ಉದ್ಘಾಟನೆ

ಮಂಗಳೂರು, ಮಾರ್ಚ್ 25, 2023 (ಕರಾವಳಿ ಟೈಮ್ಸ್) : ಮಾಜಿ ಸಚಿವ, ರಾಜ್ಯ ವಿಧಾನಸಭೆ ಪ್ರತಿಪಕ್ಷ ಉಪನಾಯಕ, ಮಂಗಳೂರು ಶಾಸಕ ಯು ಟಿ ಖಾದರ್ ನೇತೃತ್ವದಲ್ಲಿ ಲವ-ಕುಶ ಜೋಡುಕರೆ ಕಂಬಳ ಸಮಿತಿಯ ಆಶ್ರಯದಲ್ಲಿ ನರಿಂಗಾನ ಗ್ರಾಮದ ಮೋರ್ಲ ಬೋಳದಲ್ಲಿ ಹೊನಲು ಬೆಳಕಿನ ಲವಕುಶ ಜೋಡುಕರೆ ಬಯಲು ಕಂಬಳ ಮಾರ್ಚ್ 25 ರಂದು (ಇಂದು) ಉದ್ಘಾಟನೆಗೊಳ್ಳಲಿದೆ. 

ಮಾರ್ಚ್ 25 ರಂದು ಬೆಳಗ್ಗೆ 10.30ಕ್ಕೆ ಶ್ರೀ ಕ್ಷೇತ್ರ ಶಾಂತಿಪಳಿಕೆಯ ಪ್ರಧಾನ ತಂತ್ರಿ ವರ್ಕಾಡಿ ರಾಜೇಶ್ ತಾಳಿತ್ತಾಯ ಕಂಬಳ ಕೂಟ ಉದ್ಘಾಟಿಸುವರು. ಕರೆಯನ್ನು ಶ್ರೀ ಕ್ಷೇತ್ರ ಕಣಂತೂರಿನ ಆಡಳಿತ ಮೊಕ್ತೇಸರ ತಿಮ್ಮಪ್ಪ ಕೊಂಡೆಯಾನೆ ಮಂಜು ಭಂಡಾರಿ ಉದ್ಘಾಟಿಸಲಿದ್ದಾರೆ. ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೈಲಜಾ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. 

ಧಾರ್ಮಿಕ ಮುಖಂಡರುಗಳಾದ ಗುಣಕರ ಆಳ್ವ ಯಾನೆ ರಾಮ ರೈ ಬೋಳಿಯಾರ್, ಮಂಗಿಲ್ ಮಾರ್ ಶ್ರೀ ಅಣ್ಣಪ್ಪ ಸ್ವಾಮಿ ಹಾಗೂ ಪರಿವಾರದ ದೈವಗಳ ದೈವಸ್ಥಾನದ ಆಡಳಿತ ಮೊಕ್ತೇಸರ ಬಡಾಜೆ ರವಿಶಂಕರ್ ಶೆಟ್ಟಿ, ಶ್ರೀ ಕ್ಷೇತ್ರ ತಲಪಾಡಿಯ ಪ್ರಧಾನ ಅರ್ಚಕ ಗಣೇಶ್ ಭಟ್ ಪಂಜಾಲ, ದೇವಂದಪಡ್ಪು ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಆಚಾರ್ಯ, ಶ್ರೀ ಕ್ಷೇತ್ರ ಶಾಂತಿಪಳಿಕೆಯ ಆಡಳಿತ ಮೊಕ್ತೇಸರ ಪ್ರಸನ್ನ ಪಕ್ಕಳ ಬಲೆತ್ತೋಡು, ಕಂಬಳ ಸಮಿತಿಯ ಜಿಲ್ಲಾಧ್ಯಕ್ಷ ಎರ್ಮಾಳು ರೋಹಿತ್ ಹೆಗ್ಡೆ, ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅಬ್ದುಲ್ ಅಜೀಝ್ ಯಾನೆ ಮೈಸೂರು ಬಾಬಾ, ಎಸಿಪಿ ಧನ್ಯಾ ನಾಯಕ್, ಪಣಂಬೂರು ಇಡ್ಯ ಶ್ರೀ ಧೂಮಾವತಿ ದೇವಸ್ಥಾನದ ಗಡಿ ಪ್ರಧಾನ ಪ್ರಭಾಕರ್ ರೈ ಯಾನೆ ಅಣ್ಣಪ್ಪ ಅರುವಾಲ್, ಸ್ಥಳೀಯ ಸಂತ ಲಾರೆನ್ಸರ ದೇವಾಲಯದ ಧರ್ಮ ಗುರು ಫಾ ಪೆಡ್ರಿಕ್ ಕೊರೆಯಾ, ನೆತ್ತಿಲ ಬಾಳಿಕೆ ಗಡಿಪ್ರದಾನ ಮೋಹನ್ ದಾಸ್ ಭಂಡಾರಿ ಮೊದಲಾದವರು ಭಾಗವಹಿಸಲಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಇಂದು (ಮಾರ್ಚ್ 25) ಯು ಟಿ ಖಾದರ್ ಸಾರಥ್ಯದ ನರಿಂಗಾನ ಲವ-ಕುಶ ಜೋಡುಕರೆ ಕಂಬಳ ಉದ್ಘಾಟನೆ Rating: 5 Reviewed By: karavali Times
Scroll to Top