ಒಂದೇ ಗ್ರಾ ಪಂ ವ್ಯಾಪ್ತಿಯಲ್ಲಿ 5 ಮೆಡಿಕಲ್ ಕಾಲೇಜು ಹೊಂದಿರುವ ನಾವು ಗುಜರಾತಿಗೆ ಮಾದರಿಯೇ ಹೊರತು ಗುಜರಾತ್ ನಮಗೆ ಮಾದರಿಯಲ್ಲ : ಬಿ ಕೆ ಹರಿಪ್ರಸಾದ್ - Karavali Times ಒಂದೇ ಗ್ರಾ ಪಂ ವ್ಯಾಪ್ತಿಯಲ್ಲಿ 5 ಮೆಡಿಕಲ್ ಕಾಲೇಜು ಹೊಂದಿರುವ ನಾವು ಗುಜರಾತಿಗೆ ಮಾದರಿಯೇ ಹೊರತು ಗುಜರಾತ್ ನಮಗೆ ಮಾದರಿಯಲ್ಲ : ಬಿ ಕೆ ಹರಿಪ್ರಸಾದ್ - Karavali Times

728x90

25 March 2023

ಒಂದೇ ಗ್ರಾ ಪಂ ವ್ಯಾಪ್ತಿಯಲ್ಲಿ 5 ಮೆಡಿಕಲ್ ಕಾಲೇಜು ಹೊಂದಿರುವ ನಾವು ಗುಜರಾತಿಗೆ ಮಾದರಿಯೇ ಹೊರತು ಗುಜರಾತ್ ನಮಗೆ ಮಾದರಿಯಲ್ಲ : ಬಿ ಕೆ ಹರಿಪ್ರಸಾದ್

ಪಾಣೆಮಂಗಳೂರಿನಲ್ಲಿ ಕರಾವಳಿ ಪ್ರಜಾಧ್ವನಿ ಹಾಗೂ ಸೌಹಾರ್ದ ಇಫ್ತಾರ್ ಕೂಟ ಬಂಟ್ವಾಳ, ಮಾರ್ಚ್ 26, 2023 (ಕರಾವಳಿ ಟೈಮ್ಸ್) : ದೇರಳಕಟ್ಟೆ ಎಂಬಲ್ಲಿ ಒಂದು ಸಣ್ಣ ಗ್ರಾಮೀಣ ಪ್ರದೇಶದ ಪಂಚಾಯತ್ ವ್ಯಾಪ್ತಿಯಲ್ಲಿ 5 ಮೆಡಿಕಲ್ ಕಾಲೇಜುಗಳನ್ನು ಹೊಂದಿರುವ ನಮ್ಮ ಜಿಲ್ಲೆ ಗುಜರಾತ್, ಯುಪಿಗೆ ಮಾದರಿ ಹೊರತು ನಮಗೆ ಅವರು ಎಂದೂ ಮಾದರಿಯಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಹರಿಹಾಯ್ದರು. 

ಕೆಪಿಸಿಸಿ ನಿರ್ದೇಶನದ ಮೇರೆಗೆ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಶನಿವಾರ ಸಂಜೆ ಪಾಣೆಮಂಗಳೂರು ಸಾಗರ್ ಹಾಲ್ ಹೊರಾಂಗಣದಲ್ಲಿ ಹಮ್ಮಿಕೊಳ್ಳಲಾದ ಕರಾವಳಿ ಪ್ರಜಾಧ್ವನಿ ಯಾತ್ರಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೋದಿ ಸರಕಾರ ಕುಂಬಳ ಕಾಯಿ ಕಳ್ಳ ಎಂದರೆ ಹೆಗರು ಮುಟ್ಟಿ ನೋಡುತ್ತಿದೆ ಎಂದು ರಾಹುಲ್ ಗಾಂಧಿ ಘಟನೆಯನ್ನು ವಿಮರ್ಶಿಸಿದರು. 

ಬಿಜೆಪಿ ಪಕ್ಷ ಕೇವಲ ಟೀ ಮಾರಿದ ಓರ್ವನೇ ಶ್ರೀಮಂತ ಬಡವನ ಬಗ್ಗೆ ಮಾತಾನಾಡುತ್ತಿದೆ ಹೊರತು ದೇಶದ ಕೋಟ್ಯಂತರ ಬಡವರಿಗಾಗಿ ಒಂದೇ ಒಂದು ಕಾರ್ಯಕ್ರಮ ಹಾಕಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು. 

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ ರಮಾನಾಥ ರೈ, ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ, ಎಐಸಿಸಿ ಕಾರ್ಯದರ್ಶಿ ರೋಜಿ ಎಂ ಜಾನ್, ವಿಧಾನಪರಿಷತ್ ಸದಸ್ಯ, ದ ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಸದಸ್ಯರುಗಳಾದ ಪಿಯೂಸ್ ಎಲ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ ಎಸ್ ಮುಹಮ್ಮದ್, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಕೆ ಕೆ ಶಾಹುಲ್ ಹಮೀದ್, ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಿ ಸಿ ರೋಡು, ಪಂಚಾಯತ್ ರಾಜ್ ಒಕ್ಕೂಟದ ದ ಕ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುಹೈಲ್ ಖಂದಕ್, ಎನ್ ಎಸ್ ಯು ಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರುಗಳಾದ ಸುರೇಶ್ ಪೂಜಾರಿ ಜೋರಾ, ಇಬ್ರಾಹಿಂ ನವಾಝ್ ಬಡಕಬೈಲು, ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ಬಂಟ್ವಾಳ ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್ ಶಾಂತಿಅಂಗಡಿ, ಲಾರೆನ್ಸ್ ಮೆನೇಜಸ್, ಶ್ರೀಮತಿ ಅಪ್ಪಿ ಮೊದಲಾದವರು ವೇದಿಕೆಯಲ್ಲಿದ್ದರು.

ಇದೇ ವೇಳೆ ಸಾಗರ್ ಆಡಿಟೋರಿಯಂನಲ್ಲಿ ರಮಾನಾಥ ರೈ ನೇತೃತ್ವದಲ್ಲಿ ಸಾರ್ವಜನಿಕ ಸೌಹಾರ್ದ ಇಫ್ತಾರ್ ಕೂಟ ಆಯೋಜಿಸಲಾಗಿತ್ತು. 

ಧಾರ್ಮಿಕ ಮುಖಂಡ ಇರ್ಶಾದ್ ದಾರಿಮಿ ಅಲ್-ಜಝರಿ ಮಿತ್ತಬೈಲು, ಜಿ ಪಂ ಮಾಜಿ ಸದಸ್ಯ ಬಿ ಪದ್ಮಶೇಖರ ಜೈನ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ ಮಾಯಿಲಪ್ಪ ಸಾಲ್ಯಾನ್, ಬಂಟ್ವಾಳ ಪುರಸಭಾ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್, ಲೋಲಾಕ್ಷ ಶೆಟ್ಟಿ, ಬಿ ವಾಸು ಪೂಜಾರಿ, ಜನಾರ್ದನ ಚೆಂಡ್ತಿಮಾರ್, ಹಸೈನಾರ್ ತಾಳಿಪಡ್ಪು, ಬುಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಮುಡಿಪು ಬ್ಲಾಕ್ ಕಾಂಗ್ರೆಸ್ ವಕ್ತಾರ ಅಬ್ದುಲ್ ರಝಾಕ್ ಕುಕ್ಕಾಜೆ, ಸಜಿಪಮುನ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ ಯೂಸುಫ್ ಕರಂದಾಡಿ, ಪಾಣೆಮಂಗಳೂರು ವಲಯ ಕಾಂಗ್ರೆಸ್ ಅಧ್ಯಕ್ಷ ಪಿ ಎಸ್ ಮೊಹಮ್ಮದ್ ಇಕ್ಬಾಲ್, ಸಜಿಪಮೂಡ ವಲಯ ಕಾಂಗ್ರೆಸ್ ಅಧ್ಯಕ್ಷ ಎನ್ ಅಬ್ದುಲ್ ಕರೀಂ ಬೊಳ್ಳಾಯಿ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿ ಶರೀಫ್ ಭೂಯಾ, ನಾವೂರು ಗ್ರಾ ಪಂ ಅಧ್ಯಕ್ಷ ಉಮೇಶ್ ಕುಲಾಲ್ ನಾವೂರು, ಪುದು ಗ್ರಾ ಪಂ ಸದಸ್ಯ ಹಾಶೀರ್ ಪೇರಿಮಾರ್, ಪ್ರಮುಖರಾದ ಸುದರ್ಶನ ಜೈನ್, ಪಿ ಎ ರಹೀಂ, ರಾಜೇಶ್ ರೋಡ್ರಿಗಸ್, ಪ್ರವೀಣ್ ರೋಡ್ರಿಗಸ್ ವಗ್ಗ, ವೆಂಕಪ್ಪ ಪೂಜಾರಿ, ಬಿ ಮೋಹನ್, ಕೆ ಪದ್ಮನಾಭ ರೈ, ಚಂದ್ರಶೇಖರ ಪೂಜಾರಿ, ಸಂಜೀವ ಪೂಜಾರಿ ಬೊಳ್ಳಾಯಿ, ಅರ್ಶದ್ ಸರವು, ಶಬೀರ್ ಸಿದ್ದಕಟ್ಟೆ, ರಝಾಕ್ ಬಾಂಬಿಲ, ಉಮೇಶ್ ಬೋಳಂತೂರು, ರಿಯಾಝ್ ನೆಹರುನಗರ, ಪ್ರಶಾಂತ್ ಕುಲಾಲ್, ರಮೇಶ್ ಪಣೋಲಿಬೈಲು, ಶಮೀರ್ ನಂದಾವರ, ಅಬ್ದುಲ್ ಖಾದರ್ ಬಂಗ್ಲೆಗುಡ್ಡೆ, ಮಜೀದ್ ಬೋಗೋಡಿ ಮೊದಲಾದವರು ಭಾಗವಹಿಸಿದ್ದರು.

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ ಸ್ವಾಗತಿಸಿ, ವಿಧಾನಪರಿಷತ್ ಸದಸ್ಯ ಡಾ ಮಂಜುನಾಥ ಭಂಡಾರಿ ಪ್ರಸ್ತಾವನೆಗೈದರು. ಮಾಣಿ ಗ್ರಾ ಪಂ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು. 

  • Blogger Comments
  • Facebook Comments

0 comments:

Post a Comment

Item Reviewed: ಒಂದೇ ಗ್ರಾ ಪಂ ವ್ಯಾಪ್ತಿಯಲ್ಲಿ 5 ಮೆಡಿಕಲ್ ಕಾಲೇಜು ಹೊಂದಿರುವ ನಾವು ಗುಜರಾತಿಗೆ ಮಾದರಿಯೇ ಹೊರತು ಗುಜರಾತ್ ನಮಗೆ ಮಾದರಿಯಲ್ಲ : ಬಿ ಕೆ ಹರಿಪ್ರಸಾದ್ Rating: 5 Reviewed By: karavali Times
Scroll to Top