ಬೆಂಗಳೂರು, ಎಪ್ರಿಲ್ 20, 2023 (ಕರಾವಳಿ ಟೈಮ್ಸ್) : 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಮೌಲ್ಯಮಾಪನವು ಮುಕ್ತಾಗೊಂಡು ಎಲ್ಲಾ ಸಿದ್ದತೆಗಳು ಪೂರ್ಣಗೊಂಡಿದ್ದು, ಎಪ್ರಿಲ್ 21 (ನಾಳೆ) ರಂದು ಶುಕ್ರವಾರ ಬೆಳಿಗ್ಗೆ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರ ಪ್ರಕಟಣೆ ತಿಳಿಸಿದೆ.
ಮಾರ್ಚ್ 9ರಿಂದ 29ರವರೆಗೆ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದ್ದು, ಎಲ್ಲಾ ವಿಷಯಗಳ ಉತ್ತರ ಪತ್ರಿಕೆಯ ಮೌಲ್ಯಮಾಪನ ಮುಕ್ತಾಯವಾಗಿಗೊಂಡಿದೆ. ನಾಳೆ (ಎಪ್ರಿಲ್ 21) ಬೆಳಿಗ್ಗೆ 10 ಗಂಟೆಗೆ ಮಂಡಳಿ ಅಧ್ಯಕ್ಷರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಘೋಷಿಸಲಿದ್ದು, ಬೆಳಿಗ್ಗೆ 11 ಗಂಟೆಗೆ ಮಂಡಳಿ ವೆಬ್ ಸೈಟಿನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಮಂಡಳಿಯ ಪ್ರಕಟಣೆ ತಿಳಿಸಿದೆ.
0 comments:
Post a Comment