ಬಂಟ್ವಾಳ, ಎಪ್ರಿಲ್ 16, 2023 (ಕರಾವಳಿ ಟೈಮ್ಸ್) : ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರು ಭಾನುವಾರ ಬಂಟ್ವಾಳ ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಬಂಟ್ವಾಳ ಶಾಸಕ, ಬಿಜೆಪಿ ಅಭ್ಯರ್ಥಿ ಯು ರಾಜೇಶ್ ನಾಯ್ಕ್ ಅವರು ಸಂತೋಷ್ ಅವರನ್ನು ಸ್ವಾಗತಿಸಿದರು. ಈ ಸಂದರ್ಭ ಸುಮಾರು ಅರ್ಧ ತಾಸುಗಳ ಕಾಲ ಮುಂದಿನ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ್ಯ ಅರಳ, ರವೀಶ್ ಶೆಟ್ಟಿ ಕರ್ಕಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ ಬಂಟ್ವಾಳ, ಜಿಲ್ಲಾ ಮಾಧ್ಯಮ ಸಂಚಾಲಕ ಸಂದೇಶ್ ಶೆಟ್ಟಿ, ಜಿಲ್ಲಾ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಕಾನೂನು ಪ್ರಕೋಷ್ಟದ ಜಿಲ್ಲಾ ಸಂಚಾಲಕ ಶ್ರೀಧರ್ ಶೆಟ್ಟಿ ಪುಳಿಂಚ, ಬಂಟ್ವಾಳ ಕ್ಷೇತ್ರ ಸಮಿತಿ ಪ್ರಮುಖರಾದ ಪುರುಷೋತ್ತಮ ಶೆಟ್ಟಿ ವಾಮದಪದವು, ಪ್ರಕಾಶ್ ಅಂಚನ್, ಪುರುಷೋತ್ತಮ ಸಾಲಿಯಾನ್ ನರಿಕೊಂಬು, ಯಶೋಧರ ಕರ್ಬೆಟ್ಟು, ಸೀತಾರಾಮ ಪೂಜಾರಿ, ಮಹೇಶ್ ಶೆಟ್ಟಿ ಜುಮಾದಿಗುಡ್ಡೆ, ಸುರೇಶ್ ಕೋಟ್ಯಾನ್, ಮನೋಜ್ ಜಾರಂದಗುಡ್ಡೆ, ಪ್ರಣಾಮ್ ರಾಜ್ ಅಜ್ಜಿಬೆಟ್ಟು, ಅಭಿಷೇಕ್ ಸರಪಾಡಿ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment