ಪಾಂಡವರಕಲ್ಲು ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ
ಬಂಟ್ವಾಳ, ಎಪ್ರಿಲ್ 19, 2023 (ಕರಾವಳಿ ಟೈಮ್ಸ್) : ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಹೀಗಾಗಿ ಕಾಂಗ್ರೆಸ್ ಈಗಾಗಲೇ ಘೋಷಣೆ ಮಾಡಿರುವ ಗ್ಯಾರಂಟಿ ಕೊಡುಗೆಗಳು ಜನತೆಗೆ ಲಭಿಸುವುದು ನಿಶ್ಚಿತ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ ರಮಾನಾಥ ರೈ ವಿಶ್ವಾಸ ವ್ಯಕ್ತಪಡಿಸಿದರು.
ಬಡಗಕಜೆಕಾರು ಗ್ರಾಮದ ಪಾಂಡವರಕಲ್ಲು ಜಂಕ್ಷನ್ನಿನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.
ಈ ಸಂದರ್ಭ ಕೆಪಿಸಿಸಿ ಸದಸ್ಯ ಪಿಯೂಸ್ ಎಲ್ ರಾಡ್ರಿಗಸ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಜಿ ಪಂ ಮಾಜಿ ಸದಸ್ಯ ಬಿ ಪದ್ಮಶೇಖರ್ ಜೈನ್, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಬೋಳಂತೂರು, ಬುಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಅಕ್ರಮ-ಸಕ್ರಮ ಸಮಿತಿ ಮಾಜಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಪಕ್ಷ ಪ್ರಮುಖರಾದ ಸುಧಾಕರ್ ಶೆಣೈ, ಪಿ ಎ ರಹೀಂ, ಮೋನಪ್ಪ ಪೂಜಾರಿ, ಸಂಪತ್ ಕುಮಾರ್ ಶೆಟ್ಟಿ, ಜಾನ್, ಅಸ್ಲಾಂ ಅಝೀಝ್, ರಕ್ಷಿತಾ, ಡೀಕಯ್ಯ ಬಂಗೇರ, ಜಯ ಬಂಗೇರ, ವಸಂತ ಮಿತ್ತೊಟ್ಟು, ರಾಮಚಂದ್ರ ಪೂಜಾರಿ, ಬಾಬು ಪೂಜಾರಿ, ಅಬ್ದುಲ್ಲಾ, ಪುಷ್ಪಲತಾ ಮೋಹನ್, ಸದಾನಂದ ಶೆಟ್ಟಿ, ಬಾಲಕೃಷ್ಣ ಅಂಚನ್, ಆನಂದ ಪೂಜಾರಿ ಕರ್ಲ, ವಿಠಲ ಕರ್ಲ, ಬಾಲಕೃಷ್ಣ ಪ್ರಭು, ಪದ್ಮನಾಭ ಸಾಮಂತ್, ವಿಕ್ಟರ್ ದೈಕಿನಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment