ಬಂಟ್ವಾಳ, ಎಪ್ರಿಲ್ 20, 2023 (ಕರಾವಳಿ ಟೈಮ್ಸ್) : ರಾಜ್ಯ ಹಾಗೂ ಕೇಂದ್ರ ಸರಕಾರಗಳ ಆಡಳಿತದಿಂದ ಬೇಸತ್ತು ಬಿಜೆಪಿ ಕಾರ್ಯಕರ್ತರುಗಳಾದ ಅಶೋಕ್ ಹಲಾಯಿ ಸಹಿತ ಹಲವರು ಗುರುವಾರ ಕಾಂಗ್ರೆಸ್ ಸೇರ್ಪಡೆಯಾದರು.
ಬಿ ಸಿ ರೋಡಿನ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ ರಮಾನಾಥ ರೈ ಸಮ್ಮುಖದಲ್ಲಿ ಇವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಬಿಜೆಪಿ ಕಾರ್ಯಕರ್ತರಾದ ಯಮುನಾ ಕುಕ್ಕಿಪಾಡಿ, ಸರೋಜ ಕುಕ್ಕಿಪಾಡಿ, ವಿವೇಕ್ ಸಿದ್ದಕಟ್ಟೆ, ಉಮೇಶ್ ಕುದ್ಕೋಳಿ, ಗಣೇಶ್ ರಾಯಿ ಮೊದಲಾದವರು ಕೈ ಹಿಡಿದರು.
ಈ ಸಂದರ್ಭ ಮಾತನಾಡಿದ ಅಶೋಕ್ ಹಲಾಯಿ, ಮಾತೃಪಕ್ಷಕ್ಕೆ ಬಂದ ಅನುಭವವಾಗಿದೆ. ಕಾರಣಾಂತರದಿಂದ ಬೇರೆ ಪಕ್ಷ ಸೇರಿದ್ದೆ. ಈಗ ವಾಸ್ತವದ ಅರಿವಾಗಿದೆ. ಹೀಗಾಗಿ ಈ ಚುನಾವಣೆಯಲ್ಲಿ ಬಂಟ್ವಾಳದ ಅಭಿವೃದ್ಧಿಯ ಹರಿಕಾರ ಬಿ ರಮಾನಾಥ ರೈ ಅವರನ್ನು ದೊಡ್ಡ ಅಂತರದ ಗೆಲುವು ಕಾಣುವಂತೆ ಮಾಡಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದರು.
ಈ ಸಂದರ್ಭ ಕೆಪಿಸಿಸಿ ಸದಸ್ಯರಾದ ಪಿಯೂಸ್ ಎಲ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜಾ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಬೋಳಂತೂರು, ನ್ಯಾಯವಾದಿ ಸುರೇಶ್ ನಾವೂರು, ಪ್ರಮುಖರಾದ ಬಿ ಪದ್ಮಶೇಖರ್ ಜೈನ್, ಕೆ ಮಾಯಿಲಪ್ಪ ಸಾಲ್ಯಾನ್, ಜನಾರ್ದನ ಚೆಂಡ್ತಿಮಾರ್ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment