ಬಂಟ್ವಾಳ : ಚುನಾವಣೆ ಶಾಖಾ ಪ್ರಥಮ ದರ್ಜೆ ಸಹಾಯಕ ಎನ್ ನಾರಾಯಣ ಗೌಡ ಅವರಿಗೆ ಬೀಳ್ಕೊಡುಗೆ ಸಮಾರಂಭ - Karavali Times ಬಂಟ್ವಾಳ : ಚುನಾವಣೆ ಶಾಖಾ ಪ್ರಥಮ ದರ್ಜೆ ಸಹಾಯಕ ಎನ್ ನಾರಾಯಣ ಗೌಡ ಅವರಿಗೆ ಬೀಳ್ಕೊಡುಗೆ ಸಮಾರಂಭ - Karavali Times

728x90

31 May 2023

ಬಂಟ್ವಾಳ : ಚುನಾವಣೆ ಶಾಖಾ ಪ್ರಥಮ ದರ್ಜೆ ಸಹಾಯಕ ಎನ್ ನಾರಾಯಣ ಗೌಡ ಅವರಿಗೆ ಬೀಳ್ಕೊಡುಗೆ ಸಮಾರಂಭ

ಬಂಟ್ವಾಳ, ಮೇ 31, 2023 (ಕರಾವಳಿ ಟೈಮ್ಸ್) :  ಬಂಟ್ವಾಳ ತಾಲೂಕಿನ ಚುನಾವಣೆ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎನ್ ನಾರಾಯಣ ಗೌಡ ಅವರು ವಯೋ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಅವರಿಗೆ ತಾಲೂಕು ಆಡಳಿತ ಸೌಧದಲ್ಲಿ ಬುಧವಾರ ಬೀಳ್ಕೊಡುಗೆ ಹಾಗೂ ಗೌರವಾಭಿನಂದನೆ ಸಲ್ಲಿಸಲಾಯಿತು. 

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ತಾಲೂಕು ತಹಶೀಲ್ದಾರ್ ಎಸ್ ಬಿ ಕೂಡಲಗಿ ಮಾತನಾಡಿ, ಸರಳ ವ್ಯಕ್ತಿತ್ವದ, ನೇರ ನಡೆ ನುಡಿಯ ನಾರಾಯಣ ಗೌಡರು ಚುನಾವಣೆಯ ವಿಷಯ ನಿರ್ವಾಹಕರಾಗಿ ಸಮರ್ಥವಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇವರ ಮುಂದಿನ ಜೀವನ ಸುಖಮಯವಾಗಿರಲಿ ಎಂದು ಶುಭ ಹಾರೈಸಿದರು. 

ಸನ್ಮಾನ ಸ್ವೀಕರಿಸಿ ಮಾತನಾಡಿದ ಎನ್ ನಾರಾಯಣ ಗೌಡ ಅವರು ಕರ್ತವ್ಯ ನಿರ್ವಹಣೆಯಲ್ಲಿ ಸಹಕಾರ ನೀಡಿದ ಎಲ್ಲಾ ಅಧಿಕಾರಿಗಳಿಗೆ ಮತ್ತು ಸಹೋದ್ಯೋಗಿಗಳಿಗೆ ಧನ್ಯವಾದ ಸಲ್ಲಿಸಿದರು.

ಸಹೋದ್ಯೋಗಿಗಳು, ಗ್ರಾಮ ಆಡಳಿತ ಆಧಿಕಾರಿಗಳು, ಕಚೇರಿ ಸಿಬ್ಬಂದಿಗಳು, ಗ್ರಾಮ ಸಹಾಯಕರು ನಾರಾಯಣ ಗೌಡ ಅವರಿಗೆ ಶುಭ ಹಾರೈಸಿದರು. ಈ ಸಂದರ್ಭ ಉಪತಹಶೀಲ್ದಾರ್ ನರೇಂದ್ರನಾಥ ಮಿತ್ತೂರು, ವಿಜಯ್ ವಿಕ್ರಮ್, ದಿವಾಕರ ಮುಗುಳಿಯ, ಕಂದಾಯ ನಿರೀಕ್ಷಕರಾದ ವಿಜಯ್ ಆರ್, ಜನಾರ್ದನ ಜೆ, ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಆಡಳಿತ ಆಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ವಿಟ್ಲ ಹೋಬಳಿ ಕಂದಾಯ ನಿರೀಕ್ಷಕ ಪ್ರಶಾಂತ್ ಶೆಟ್ಟಿ ಸ್ವಾಗತಿಸಿ, ಉಪತಹಶೀಲ್ದಾರ್ ನವೀನ್ ಬೆಂಜನಪದವು ಕಾರ್ಯಕ್ರಮ ನಿರೂಪಿಸಿದರು. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ : ಚುನಾವಣೆ ಶಾಖಾ ಪ್ರಥಮ ದರ್ಜೆ ಸಹಾಯಕ ಎನ್ ನಾರಾಯಣ ಗೌಡ ಅವರಿಗೆ ಬೀಳ್ಕೊಡುಗೆ ಸಮಾರಂಭ Rating: 5 Reviewed By: karavali Times
Scroll to Top