ಮತ ಎಣಿಕೆ ಹಿನ್ನಲೆ : ಮೇ 13 ರಂದು ನಿಷೇಧಾಜ್ಞೆ ವಿಧಿಸಿ ದ.ಕ. ಜಿಲ್ಲಾಧಿಕಾರಿ ಆದೇಶ - Karavali Times ಮತ ಎಣಿಕೆ ಹಿನ್ನಲೆ : ಮೇ 13 ರಂದು ನಿಷೇಧಾಜ್ಞೆ ವಿಧಿಸಿ ದ.ಕ. ಜಿಲ್ಲಾಧಿಕಾರಿ ಆದೇಶ - Karavali Times

728x90

11 May 2023

ಮತ ಎಣಿಕೆ ಹಿನ್ನಲೆ : ಮೇ 13 ರಂದು ನಿಷೇಧಾಜ್ಞೆ ವಿಧಿಸಿ ದ.ಕ. ಜಿಲ್ಲಾಧಿಕಾರಿ ಆದೇಶ

ಮಂಗಳೂರು, ಮೇ 12, 2023 (ಕರಾವಳಿ ಟೈಮ್ಸ್) : ಕರ್ನಾಟಕ ವಿಧಾನಸಭೆ ಚುನಾವಣೆ-2023 ರ ಮತ ಎಣಿಕೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 13 ರಂದು ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. 

ನಿಷೇಧಾಜ್ಞೆ ಆದೇಶದಂತೆ ಮೇ 13 ರಂದು ಬೆಳಿಗ್ಗೆ 5 ಗಂಟೆಯಿಂದ ಮಧ್ಯರಾತ್ರಿ 12 ಗÀಂಟೆವರೆಗೆ  ಜಿಲ್ಲೆಯಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು, ವಿಜಯೋತ್ಸವ ಆಚರಿಸುವುದನ್ನು ನಿಷೇಧಿಸಿದೆ. ಯಾವುದೇ ರೀತಿಯ ಮಾರಕಾಸ್ತ್ರಗಳನ್ನು, ಕಲ್ಲು, ಕ್ಷಾರಕ  ವಸ್ತುಗಳು, ಸ್ಫೋಟಕಗಳನ್ನು ಸಂಗ್ರಹಿಸುವುದು, ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಯಾವುದೇ ಪ್ರತಿಕೃತಿ ಪ್ರದರ್ಶನ ಅಥವಾ ಸುಡುವುದನ್ನು ನಿಷೇಧಿಸಲಾಗಿದೆ. ಯಾವುದೇ ಬಹಿರಂಗ ಘೋಷಣೆ ಕೂಗುವುದು, ವಾದ್ಯ ಬಾರಿಸುವುದು, ಪದ ಹಾಡುವುದು, ನಕಲಿ ಪ್ರದರ್ಶನ, ಪ್ರಚೋದನಕಾರಿ ಘೋಷಣೆ ಕೂಗುವುದು, ವ್ಯಕ್ತಿಗಳ ತೆಜೋವಧೆ ಮಾಡುವ ಕೃತ್ಯಗಳು ಇತ್ಯಾದಿಗಳನ್ನು ನಿಷೇಧಿಸಿದೆ. ಸಾರ್ವಜನಿಕ ಗಾಂಭಿರ್ಯ, ನೈತಿಕತೆ, ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯದಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ. ಮೇಲ್ಕಂಡ ಆದೇಶವನ್ನು ಉಲ್ಲಂಘಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ ಆರ್ ರವಿಕುಮಾರ್ ಆದೇಶದಲ್ಲಿ ತಿಳಿಸಿದ್ದು, ಆದೇಶ ಜಾರಿ ಮಾಡುವಲ್ಲಿ ಸಾರ್ವಜನಿಕರು ಪೆÇಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಅವರು ಕೋರಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಮತ ಎಣಿಕೆ ಹಿನ್ನಲೆ : ಮೇ 13 ರಂದು ನಿಷೇಧಾಜ್ಞೆ ವಿಧಿಸಿ ದ.ಕ. ಜಿಲ್ಲಾಧಿಕಾರಿ ಆದೇಶ Rating: 5 Reviewed By: karavali Times
Scroll to Top