ಸರಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಭರವಸೆ ಶರತ್ತುಗಳಿಲ್ಲದೆ ಜಾರಿ : ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - Karavali Times ಸರಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಭರವಸೆ ಶರತ್ತುಗಳಿಲ್ಲದೆ ಜಾರಿ : ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - Karavali Times

728x90

30 May 2023

ಸರಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಭರವಸೆ ಶರತ್ತುಗಳಿಲ್ಲದೆ ಜಾರಿ : ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ

ಬೆಂಗಳೂರು, ಮೇ 30, 2023 (ಕರಾವಳಿ ಟೈಮ್ಸ್) : ರಾಜ್ಯದ ಎಲ್ಲಾ ಮಹಿಳೆಯರಿಗೂ ಸರಕಾರಿ ಬಸ್ಸುಗಳಲ್ಲಿ ಪ್ರಯಾಣ ಸಂಪೂರ್ಣ ಉಚಿತವಾಗಿರಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಂಗಳವಾರ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

ರಾಜ್ಯ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕಾಂಗ್ರೆಸ್ ಪಕ್ಷದ ನಾಯಕರು ಚುನಾವಣಾ ಪೂರ್ವ ರಾಜ್ಯದ ಜನತೆಗೆ ನೀಡಿದ್ದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಮಹಿಳೆಯರಿಗೆ ಸರಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಭರವಸೆಯನ್ನು ಯಾವುದೇ ಷರತ್ತುಗಳಿಲ್ಲದೆ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

ಸರಕಾರಿ ಬಸ್ಸುಗಳಲ್ಲಿ ಬಿಪಿಎಲ್ ಕಾರ್ಡು ಇದ್ದ ಮಹಿಳೆಯರಿಗೆ ಮಾತ್ರ ಉಚಿತ ಪ್ರಯಾಣಿಸಬಹುದು ಎಂಬ ಷರತ್ತು ವಿಧಿಸಿಲ್ಲ. ಬಿಪಿಎಲ್-ಎಪಿಎಲ್ ಕಾರ್ಡು ಹೊಂದಿರುವ ಎಲ್ಲಾ ಮಹಿಳೆಯರಿಗೂ ಉಚಿತ ಪ್ರಯಾಣ ಎಂದರು.

ಸಾರಿಗೆ ಅಧಿಕಾರಿಗಳು ಮೂರು-ನಾಲ್ಕು ಆಯ್ಕೆಗಳನ್ನು ಕೊಟ್ಟಿದ್ದಾರೆ. ಕಂಡಿಷನ್ ಬಗ್ಗೆ ಸರಕಾರ ಹೇಳಲಿ. ಆದರೆ ಎಲ್ಲಾ ಮಹಿಳೆಯರಿಗೆ ಉಚಿತ ಅನ್ನೋದು ನಮ್ಮ ಪ್ರಣಾಳಿಕೆಯಾಗಿತ್ತು. ನಾಳೆ ಸಚಿವ ಸಂಪುಟದಲ್ಲಿ ಸಾರಿಗೆ ಇಲಾಖೆ ವರದಿ ಕೊಡುತ್ತೇವೆ. ನಾಳೆ ಉಚಿತ ಬಸ್ ಪ್ರಯಾಣ ಗ್ಯಾರಂಟಿ ಜಾರಿಗೆ ಬರುವುದರಲ್ಲಿ ಅನುಮಾನವೇ ಇಲ್ಲ ಎಂದರು.

ಯೋಜನೆ ಜಾರಿಗೆ ಪ್ರತಿವರ್ಷ ಅಂದಾಜು 3,200 ಕೋಟಿ ಹಣ ಬೇಕಾಗುತ್ತದೆ. ಸಾರಿಗೆ ಇಲಾಖೆಯ ನಾಲ್ಕು ನಿಗಮಗಳು ನಷ್ಟದಲ್ಲಿರುವ ಹಿನ್ನೆಲೆ ಸರಕಾರ ಸಹಾಯಧನ ನೀಡಿದರೇ ಯೋಜನೆ ಜಾರಿಗೆ ಮಾಡಲು ಅನುಕೂಲವಾಗುತ್ತದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆ.ಎಸ್.ಆರ್.ಟಿ.ಸಿ) ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಗ್ಯಾರಂಟಿಯನ್ನು ಜಾರಿಗೊಳಿಸುವ ಬಗ್ಗೆ ರೂಪುರೇಷೆಗಳನ್ನು ಚರ್ಚಸಿದರು. ಸಭೆಯಲ್ಲಿ ಚರ್ಚೆಗೆ ಬಂದ ವಿಷಯಗಳನ್ನು ವರದಿ ರೂಪದಲ್ಲಿ ಮುಖ್ಯಮಂತ್ರಿಗಳ ಮುಂದೆ ಮಂಡಿಸಲಾಗುವುದು. ಅವರು ಈಗಾಗಲೇ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಜೊತೆ ನಿನ್ನೆಯೇ ಮಾತನಾಡಿದ್ದಾರೆ. ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಸಿಎಂಗೆ ವರದಿ ಸಲ್ಲಿಸುತ್ತಾರೆ. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಯೋಜನೆ ಜಾರಿಗೆ ನಿರ್ಧಾರ ಮಾಡುತ್ತಾರೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

  • Blogger Comments
  • Facebook Comments

0 comments:

Post a Comment

Item Reviewed: ಸರಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಭರವಸೆ ಶರತ್ತುಗಳಿಲ್ಲದೆ ಜಾರಿ : ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ Rating: 5 Reviewed By: karavali Times
Scroll to Top