ಕುಕ್ಕಿಪಾಡಿ : ಬಂಟ್ವಾಳ ಎಸ್.ವಿ.ಎಸ್. ಕಾಲೇಜು ಎನ್.ಎಸ್.ಎಸ್. ವಿದ್ಯಾರ್ಥಿಗಳ ವಾರ್ಷಿಕ ವಿಶೇಷ ಶಿಬಿರ - Karavali Times ಕುಕ್ಕಿಪಾಡಿ : ಬಂಟ್ವಾಳ ಎಸ್.ವಿ.ಎಸ್. ಕಾಲೇಜು ಎನ್.ಎಸ್.ಎಸ್. ವಿದ್ಯಾರ್ಥಿಗಳ ವಾರ್ಷಿಕ ವಿಶೇಷ ಶಿಬಿರ - Karavali Times

728x90

8 June 2023

ಕುಕ್ಕಿಪಾಡಿ : ಬಂಟ್ವಾಳ ಎಸ್.ವಿ.ಎಸ್. ಕಾಲೇಜು ಎನ್.ಎಸ್.ಎಸ್. ವಿದ್ಯಾರ್ಥಿಗಳ ವಾರ್ಷಿಕ ವಿಶೇಷ ಶಿಬಿರ

ಬಂಟ್ವಾಳ, ಜೂನ್ 08, 2023 (ಕರಾವಳಿ ಟೈಮ್ಸ್) : ರಾಷ್ಟ್ರೀಯ ಸೇವಾಯೋಜನೆಯು ವಿದ್ಯಾರ್ಥಿಜೀವನದಲ್ಲಿ ಅತ್ಯಂತ ಮಹತ್ತರವಾದುದು. ಇವು ಪ್ರತಿಯೊಬ್ಬ ವಿದ್ಯಾರ್ಥಿಯ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾದುದು. ವಿದ್ಯಾರ್ಥಿ ಜೀವನದಲ್ಲಿ ಈ ರೀತಿಯ ಚಟುವಟಿಕೆಗಳಿಂದ ಮಕ್ಕಳು ಸಮಾಜಮುಖಿಯಾಗಲು ಸಹಕಾರಿಯಾಗುತ್ತದೆ ಎಂದು ಕುಕ್ಕಿಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತಾ ಆರ್ ಪೂಜಾರಿ ಅಭಿಪ್ರಾಯಪಟ್ಟರು. 

ಕುಕ್ಕಿಪಾಡಿ ಗ್ರಾಮ ಪಂಚಾಯತ್ ಆಶ್ರಯದಲ್ಲಿ ನಡೆಯುತ್ತಿರುವ ಬಂಟ್ವಾಳ ಎಸ್ ವಿ ಎಸ್ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಪರಿಸರದ ಅಧ್ಯಯನದ ಜೊತೆಗೆ ಶೈಕ್ಷಣಿಕ ಕಾರ್ಯಕ್ರಮಗಳು ನಡೆಯುತ್ತಿರುವುದು ವಿದ್ಯಾರ್ಥಿಗಳಿಗೆ ಉಪಯುಕ್ತವಾಗಿದೆ ಎಂದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲ ಡಾ ಸುಯೋಗ ವರ್ಧನ್ ಡಿ ಎಂ. ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪಠ್ಯ ವಿಷಯಗಳಿಗೆ ಸೀಮಿತರಾಗದೇ ಇಂತಹ ಚಟುವಟಿಕೆಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಅವರ ಜ್ಞಾನ ವಿಕಾಸಕ್ಕೆ ಸಹಕಾರಿಯಾಗುತ್ತದೆ ಎಂದರು. 

ಗ್ರಾಮ ಪಂಚಾಯತ್ ಉಪಾಧ್ಯಕ್ಷ ಯೋಗೀಶ ಆಚಾರ್ಯ, ಸದಸ್ಯರಾದ ಲಿಂಗಪ್ಪ ಪೂಜಾರಿ, ಶೇಖರ ಶೆಟ್ಟಿ, ನಾಟಿ ವೈದ್ಯ ವಿಶ್ವನಾಥ ಪೂಜಾರಿ, ಎನ್ ಎಸ್ ಎಸ್ ಘಟಕ ನಾಯಕರಾದ ಚೇತನ್, ಜಯಶ್ರೀ ಭಾಗವಹಿಸಿದ್ದರು. 

ಕಾರ್ಯಕ್ರಮಾಧಿಕಾರಿ ಡಾ ಕಾಶೀನಾಥ ಶಾಸ್ತ್ರಿ ಎಚ್ ವಿ ಸ್ವಾಗತಿಸಿ, ಸಹ ಕಾರ್ಯಕ್ರಮಾಧಿಕಾರಿ ಲಕ್ಷ್ಮಣ್ ವಂದಿಸಿದರು. ಶ್ರದ್ಧಾ ಪ್ರಾರ್ಥಿಸಿದರು. ಕಿಟ್ಟು ಕೆ ರಾಮಕುಂಜ ಕಾರ್ಯಕ್ರಮ ನಿರೂಪಿಸಿದರು. 

  • Blogger Comments
  • Facebook Comments

0 comments:

Post a Comment

Item Reviewed: ಕುಕ್ಕಿಪಾಡಿ : ಬಂಟ್ವಾಳ ಎಸ್.ವಿ.ಎಸ್. ಕಾಲೇಜು ಎನ್.ಎಸ್.ಎಸ್. ವಿದ್ಯಾರ್ಥಿಗಳ ವಾರ್ಷಿಕ ವಿಶೇಷ ಶಿಬಿರ Rating: 5 Reviewed By: karavali Times
Scroll to Top