ಬೆಂಗಳೂರು, ಜುಲೈ 10, 2023 (ಕರಾವಳಿ ಟೈಮ್ಸ್) : 2023-24ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ/ ನೀಟ್ ಮೂಲಕ ಆಯ್ಕೆಯಾಗುವ ವೈದ್ಯಕೀಯ (ಎಂಬಿಬಿಎಸ್), ಬಿಡಿಎಸ್, ಬಿಇ/ ಬಿಟೆಕ್, ಬ್ಯಾಚುರಲ್ ಆಫ್ ಆರ್ಕಿಟೆಕ್ಚರ್, ಬಿ ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ಮೊದಲಾದ ಕೋರ್ಸುಗಳಿಗೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳು “ಅರಿವು” ಶೈಕ್ಷಣಿಕ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಇದ್ದ ಅಂತಿಮ ದಿನಾಂಕವನ್ನು ವಿಸ್ತರಿಸಲಾಗಿದೆ.
ಆನ್ ಲೈನ್ ಅರ್ಜಿ ಸಲ್ಲಿಕೆಗೆ ಜುಲೈ 15 ರವರೆಗೆ ಕೊನೆ ದಿನಾಂಕ ವಿಸ್ತರಿಸಲಾಗಿದ್ದು, ನಿಗಮದ ವೆಬ್ ಸೈಟ್ ಮೂಲಕ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು. ಈ ಹಿಂದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 10 ಆಗಿತ್ತು. ಇದೀಗ ವಿದ್ಯಾರ್ಥಿಗಳು ಹಾಗೂ ಪೋಷಕರ ಕೋರಿಕೆ ಮೇರೆಗೆ ಕೊನೆ ದಿನಾಂಕವನ್ನು ವಿಸ್ತರಿಸಲಾಗಿದ್ದು. ಅರ್ಹರು ಸದುಪಯೋಗಪಡಿಸಿಕೊಳ್ಳಬಹುದು.
ವಿದ್ಯಾರ್ಥಿಗಳು ಆನ್ ಲೈನ್ ಅರ್ಜಿ ಸಲ್ಲಿಸಿದ ಬಳಿಕ ಮೂಲ ಬಾಂಡ್ ಪ್ರತಿಗಳ ಸಹಿತ ಎಲ್ಲ ದಾಖಲಾತಿಗಳ ಪ್ರತಿಗಳನ್ನು ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದ ಆಯಾ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಜುಲೈ 15ರೊಳಗೆ ಸಲ್ಲಿಸುವಂತೆ ಕೆಎಂಡಿಸಿ ಪ್ರಕಟಣೆ ತಿಳಿಸಿದೆ.
0 comments:
Post a Comment