ಬೆಂಗಳೂರು, ಜುಲೈ 18, 2023 (ಕರಾವಳಿ ಟೈಮ್ಸ್) : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಕಾಂಗ್ರೆಸ್ ಧುರೀಣ, ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರ ಪಾರ್ಥಿವ ಶರೀರದ ದರ್ಶನ ಪಡೆದು, ಅಂತಿಮ ನಮನ ಸಲ್ಲಿಸಿದ್ದಾರೆ.
ಉಮ್ಮನ್ ಚಾಂಡಿ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ ಅವರು, ಹಿರಿಯ ರಾಜಕೀಯ ಮುತ್ಸದ್ದಿ, ಕೇರಳದ ಮಾಜಿ ಮುಖ್ಯಮಂತ್ರಿ ಓಮೆನ್ ಚಾಂಡಿ ಅವರ ನಿಧನ ಅತೀವ ದುಃಖವುಂಟುಮಾಡಿದೆ. ಚಾಂಡಿಯವರ ನಿಧನದಿಂದ ಸಂವಿಧಾನ, ಪ್ರಜಾಪ್ರಭುತ್ವ, ದುರ್ಬಲ ಜನರ ಪರವಾದ ಗಟ್ಟಿ ಧ್ವನಿಯೊಂದು ಇಲ್ಲವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ಚಾಂಡಿಯವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ದೇವರು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಂತಾಪ ಸೂಚಕ ಹೇಳಿಕೆಯಲ್ಲಿ ತಿಳಿಸಿದ್ದಾರೆ.
0 comments:
Post a Comment