ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆಯ ಅತ್ಯಾಚಾರ ಎಸಗಿ ವಿದೇಶಕ್ಕೆ ಪರಾರಿ : ಆರೋಪಿ ವಿರುದ್ದ ವಿಟ್ಲ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು - Karavali Times ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆಯ ಅತ್ಯಾಚಾರ ಎಸಗಿ ವಿದೇಶಕ್ಕೆ ಪರಾರಿ : ಆರೋಪಿ ವಿರುದ್ದ ವಿಟ್ಲ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು - Karavali Times

728x90

21 July 2023

ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆಯ ಅತ್ಯಾಚಾರ ಎಸಗಿ ವಿದೇಶಕ್ಕೆ ಪರಾರಿ : ಆರೋಪಿ ವಿರುದ್ದ ವಿಟ್ಲ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

ಬಂಟ್ವಾಳ, ಜುಲೈ 21, 2023 (ಕರಾವಳಿ ಟೈಮ್ಸ್) : ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರ ನಡೆಸಿ ಬಳಿಕ ವಂಚಿಸಿ ವಿದೇಶಕ್ಕೆ ಪರಾರಿಯಾದ ಆರೋಪಿ ಅಬ್ದುಲ್ ಸಮೀರ್ ವಿರುದ್ದ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಅಪ್ರಾಪ್ತ ಬಾಲಕಿಯನ್ನು ಆರೋಪಿ ಅಬ್ದುಲ್ ಸಮೀರ್ ಮೋಬೈಲ್‍ನಲ್ಲಿ ಮಾತನಾಡಿಕೊಂಡು ಪ್ರೀತಿಸುತ್ತಿದ್ದು ಬಳಿಕ ಮದುವೆಯಾಗುತ್ತೇನೆಂದು ನಂಬಿಸಿ ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಬಾಲಕಿಯ ಮನೆ ಸಮೀಪದ ನಿರ್ಮಾಣ ಹಂತದ ಮನೆಯೊಂದರ ಬಳಿ 2019ರ ನವಂಬರ್ ತಿಂಗಳಿನಿಂದ ಡಿಸೆಂಬರ್ ತಿಂಗಳ ಅಂತ್ಯದವರೆಗಿನ ಅವಧಿಯಲ್ಲಿ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ ಎರಡು ಬಾರಿ ಬಲತ್ಕಾರವಾಗಿ ಅತ್ಯಾಚಾರ ನಡೆಸಿದ್ದಾನೆ. ಬಳಿಕ ಆರೋಪಿ ಮದುವೆಯಾಗದೆ ಮೋಸ ಮಾಡಿ ವಿದೇಶಕ್ಕೆ ಪರಾರಿಯಾಗಿರುತ್ತಾನೆ ಎಂದು ಆರೋಪಿಸಲಾಗಿದೆ. 

ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 119/2023 ಕಲಂ 5(ಎಲ್), (ಎನ್), 6 ಪೋಕ್ಸೊ ಕಾಯ್ದೆ 2012 ಮತ್ತು ಕಲಂ 376 (2) (ಎಫ್), (ಎನ್), 420  ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆಯ ಅತ್ಯಾಚಾರ ಎಸಗಿ ವಿದೇಶಕ್ಕೆ ಪರಾರಿ : ಆರೋಪಿ ವಿರುದ್ದ ವಿಟ್ಲ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು Rating: 5 Reviewed By: karavali Times
Scroll to Top