ಸುಳ್ಯ, ಆಗಸ್ಟ್ 15, 2023 (ಕರಾವಳಿ ಟೈಮ್ಸ್) : ಹೊಟ್ಟೆ ನೋವಿಗೆ ಪುತ್ತೂರಿನ ಚೇತನಾ ಆಸ್ಪತ್ರೆಗೆ ದಾಖಲಾಗಿದ್ದ 17 ವರ್ಷನ ಅಪ್ರಾಪ್ರ ಬಾಲಕನನ್ನು ಶಸ್ತ್ರ ಚಿಕಿತ್ಸೆ ನಡೆಸಿ ನಂತರ ಚಿಕಿತ್ಸೆಗೆ ಉಪಕರಣವಿಲ್ಲ ಎಂದು ಹೇಳಿ ಕಳಿಸಿದ ಬಳಿಕ ಬಾಲಕ ಮಂಗಳೂರು ಆಸ್ಪತ್ರೆಯಲ್ಲಿ ಸಾವೀಗೀಡಾಗಿದ್ದು, ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಸುಳ್ಯ ತಾಲೂಕು, ಸುಳ್ಯ ಕಸಬಾ ಗ್ರಾಮದ ನಿವಾಸಿ ಕೃಷ್ಣ ಜಿ ಅವರು ದೂರು ನೀಡಿದ್ದು, ಆಗಸ್ಟ್ 12 ರಂದು ತನ್ನ ಅಣ್ಣನ ಮಗನಿಗೆ ಹೊಟ್ಟೆ ನೋವು ಪ್ರಾರಂಭವಾಗಿದ್ದು, ಆತನನ್ನು ಚಿಕಿತ್ಸೆಗಾಗಿ ಪುತ್ತೂರಿನ ಚೇತನಾ ಆಸ್ಪತ್ರೆಗೆ ರಾತ್ರಿ ಕರೆದುಕೊಂಡು ಬಂದಾಗ ಅಲ್ಲಿದ್ದ ಡ್ಯೂಟಿ ಡಾಕ್ಟರ್ ಪರೀಕ್ಷಿಸಿ ಒಳ ರೋಗಿಯಾಗಿ ದಾಖಲಿಸಿಕೊಂಡಿರುತ್ತಾರೆ. ಆ 13 ರಂದು ಬೆಳಿಗ್ಗೆ ವೈದ್ಯರು ಬಂದಾಗ ಶಸ್ತ್ರ ಚಿಕಿತ್ಸೆ ಮಾಡಬೇಕೆಂದು ತಿಳಿಸಿ ಸಂಜೆ 6 ಗಂಟೆಗೆ ಬಾಲಕನನ್ನು ಶಸ್ತ್ರ ಚಿಕಿತ್ಸೆ ಮುಗಿಸಿ ವಾಪಾಸು ಐ.ಸಿ.ಯು ವಾರ್ಡಿಗೆ ಕರೆತಂದಿದ್ದಾರೆ.
ಬಳಿಕ ಆ 14 ರಂದು ಬೆಳಿಗ್ಗೆ ಸುಮಾರು 9 ಗಂಟೆಗೆ ಚೇತನಾ ಆಸ್ಪತ್ರೆಯ ವೈದ್ಯರು ಬಾಲಕನನ್ನು ನೋಡಿಕೊಳ್ಳಲು ನಮ್ಮಲ್ಲಿ ಸರಿಯಾದ ಉಪಕರಣ ಇಲ್ಲ ಕೂಡಲೇ ಮಂಗಳೂರಿಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ. ಅದರಂತೆ ಮನೆ ಮಂದಿ ಬಾಲಕನನ್ನು ಆಂಬುಲೆನ್ಸ್ ವಾಹನದಲ್ಲಿ ಮಂಗಳೂರಿನ ಜ್ಯೋತಿ ವೃತ್ತದಲ್ಲಿರುವ ಕೆ.ಎಂ.ಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು. ಅಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಬಾಲಕ ಮೃತಪಟ್ಟಿದ್ದಾನೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ ಎಂದು ನೀಡಿದ ದೂರಿನಂತೆ ಪುತ್ತೂರು ನಗರ ಪೆÇಲೀಸ್ ಠಾಣೆಯಲ್ಲಿ ಯುಡಿಅರ್ ನಂಬ್ರ 33/2023 ಕಲಂ 174 (3) ಸಿಆರ್‍ಪಿಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
0 comments:
Post a Comment