ನಾಡಹಬ್ಬ ದಸರಾ ಮಹೋತ್ಸವ ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಕ್ರಮ : ಸಿಎಂ ಸಿದ್ದರಾಮಯ್ಯ - Karavali Times ನಾಡಹಬ್ಬ ದಸರಾ ಮಹೋತ್ಸವ ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಕ್ರಮ : ಸಿಎಂ ಸಿದ್ದರಾಮಯ್ಯ - Karavali Times

728x90

1 August 2023

ನಾಡಹಬ್ಬ ದಸರಾ ಮಹೋತ್ಸವ ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಕ್ರಮ : ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್ 01, 2023 (ಕರಾವಳಿ ಟೈಮ್ಸ್) : ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಂಬAಧಿಸಿದAತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯ ಸಭೆ ಬೆಂಗಳೂರಿನಲ್ಲಿ ನಡೆಯಿತು. 

ನಾಡಹಬ್ಬ ದಸರಾ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ಧೂರಿಯಾಗಿ ಆಚರಿಸಬೇಕು ಹಾಗೂ ದಸರಾ ಜನರ ಉತ್ಸವವಾಗಬೇಕು ಎಂದು ಸಭೆ ತೀರ್ಮಾನಿಸಿದೆ. ದಸರಾ ಹಬ್ಬವನ್ನು ಅಕ್ಟೋಬರ್ 15ರ ಬೆಳಿಗ್ಗೆ 10.15 ರಿಂದ 10.30ಕ್ಕೆ ಸಲ್ಲುವ ಮಹೂರ್ತದಲ್ಲಿ ಉದ್ಘಾಟಿಸಲಿದ್ದು, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕöÈತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಚರಿಸಲು ತೀರ್ಮಾನಿಸಲಾಯಿತು. ಜಂಬೂ ಸವಾರಿ, ದೀಪಾಲಂಕಾರ, ಪಂಜಿನ ಕವಾಯತು ಬಹಳ ಮುಖ್ಯವಾಗಿ ಆಚರಿಸಲ್ಪಡುತ್ತದೆ. ಈ ಬಾರಿ ದೀಪಾಲಂಕಾರ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರದ ಒಂದು ವಾರದವವರೆಗೆ  ದೀಪಾಲಂಕಾರ ಇರಲಿದೆ. ಸ್ತಬ್ಧಚಿತ್ರಗಳ ಆಯ್ಕೆ ಮಾಡುವ ಸಂದರ್ಭದಲ್ಲಿ ರಾಜ್ಯದ ಪರಂಪರೆ, ಜಿಲ್ಲಾ ವೈಶಿಷ್ಟ÷್ಯತೆಗಳ ಜೊತೆಗೆ ಸರಕಾರದ ಮಹತ್ವಾಕಾಂಕ್ಷೆಯ 5 ಗ್ಯಾರಂಟಿಗಳನ್ನು ಬಿಂಬಿಸಿ ಜನರಿಗೆ ಸಂದೇಶವನ್ನು ನೀಡುವಂತಿರಲಿದೆ ಎಂದು ತೀರ್ಮಾನಿಸಲಾಗಿದೆ. 

ದಸರಾ ಉದ್ಘಾಟನಾ ದಿನದಂದೇ ವಸ್ತು ಪ್ರದರ್ಶನವೂ ಉದ್ಘಾಟನೆಯಾಗಲಿದ್ದು, ವಸ್ತು ಪ್ರದರ್ಶನದಲ್ಲಿ ಸರಕಾರಿ ಇಲಾಖೆಗಳು ಮಳಿಗೆಗಳನ್ನು ತೆರೆಯಬೇಕು ಹಾಗೂ ಎಲ್ಲ ಮಳಿಗೆಗಳೂ ಭರ್ತಿಯಾಗಿರಬೇಕೆಂದು ತೀರ್ಮಾನಿಸಲಾಗಿದೆ. ಎಲ್ಲಾ ಪ್ರಕಾರಗಳಲ್ಲಿ ರಾಜ್ಯದ ಉತ್ತಮ ಕಲಾವಿದರಿದ್ದಾರೆ. ಅವರಿಗೆ ಹೆಚ್ಚಿನ ಒತ್ತು ನೀಡಲು ಹಾಗೂ ಕಾಲೇಜು ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಯುವ ದಸರಾದಲ್ಲಿ ವೇದಿಕೆ ಕಲ್ಪಿಸಿ, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಪ್ರಾಶಸ್ತ÷್ಯ ನೀಡಲು ನಿರ್ಧರಿಸಲಾಗಿದೆ.

ನಾಡಹಬ್ಬ ದಸರಾ ನೋಡಲು ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲ ಸೌಕಾರ್ಯಗಳನ್ನು ಒದಗಿಸಬೇಕು.

ಶಕ್ತಿ ಯೋಜನೆಯಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸುವ ನಿರೀಕ್ಷೆ ಇದ್ದು, ಯಾವುದೇ ತೊಂದರೆಗಳಾಗದAತೆ ಎಲ್ಲ ರೀತಿಯ ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವ ಬಗ್ಗೆಯೂ ಸಭೆಯಲ್ಲಿ ತೀರ್ಮಾನಿಸಲಾಯಿತು. ದಸರಾ ಸಂದರ್ಭದಲ್ಲಿ ಏರ್ ಶೋ ಹಮ್ಮಿಕೊಳ್ಳುವ ಉದ್ದೇಶವಿದ್ದು, ಈ ಕುರಿತು ಕೇಂದ್ರ ರಕ್ಷಣಾ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಸಭೆ ನಿರ್ಣಯಿಸಿದೆ. 

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಎಚ್.ಸಿ. ಮಹದೇವಪ್ಪ, ಶಿವರಾಜ ತಂಗಡಗಿ, ಎಚ್.ಕೆ. ಪಾಟೀಲ್, ಭೈರತಿ ಸುರೇಶ್, ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಜಿ.ಟಿ. ದೇವೇಗೌಡ, ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮೈಸೂರು ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ  ಮೊದಲಾದವರು ಭಾಗವಹಿಸಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ನಾಡಹಬ್ಬ ದಸರಾ ಮಹೋತ್ಸವ ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಕ್ರಮ : ಸಿಎಂ ಸಿದ್ದರಾಮಯ್ಯ Rating: 5 Reviewed By: karavali Times
Scroll to Top