ಬಂಟ್ವಾಳ ಪುರಸಭಾ ವ್ಯಾಪ್ತಿಯ 4 ಕಡೆಗಳಲ್ಲಿ ಗೃಹಲಕ್ಷ್ಮಿ ಅನುಷ್ಠಾನ ಕಾರ್ಯಕ್ರಮದ ವೀಕ್ಷಣೆಗೆ ಅವಕಾಶ - Karavali Times ಬಂಟ್ವಾಳ ಪುರಸಭಾ ವ್ಯಾಪ್ತಿಯ 4 ಕಡೆಗಳಲ್ಲಿ ಗೃಹಲಕ್ಷ್ಮಿ ಅನುಷ್ಠಾನ ಕಾರ್ಯಕ್ರಮದ ವೀಕ್ಷಣೆಗೆ ಅವಕಾಶ - Karavali Times

728x90

29 August 2023

ಬಂಟ್ವಾಳ ಪುರಸಭಾ ವ್ಯಾಪ್ತಿಯ 4 ಕಡೆಗಳಲ್ಲಿ ಗೃಹಲಕ್ಷ್ಮಿ ಅನುಷ್ಠಾನ ಕಾರ್ಯಕ್ರಮದ ವೀಕ್ಷಣೆಗೆ ಅವಕಾಶ

ಬಂಟ್ವಾಳ, ಆಗಸ್ಟ್ 29, 2023 (ಕರಾವಳಿ ಟೈಮ್ಸ್) :  ಸರಕಾರದ ಸುತ್ತೋಲೆಯಂತೆ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ಆಗಸ್ಟ್ 30 ರಂದು ಬುಧವಾರ (ನಾಳೆ) ಸರಕಾರಿ ಮಟ್ಟದಲ್ಲಿ ಮೈಸೂರಿನಲ್ಲಿ ಪೂರ್ವಾಹ್ನ 12 ರಿಂದ ಅಪರಾಹ್ನ 1 ಗಂಟೆವರೆಗೆ ನಡೆಯಲಿದ್ದು, ಈ ಕಾರ್ಯಕ್ರಮವನ್ನು ಫಲಾನುಭವಿಗಳು ವೀಕ್ಷಿಸಲು ರಾಜ್ಯದ ವಿವಿಧ ಕಡೆಗಳಲ್ಲಿ ಸೂಕ್ತ ವ್ಯವಸ್ಥೆ ಮಾಡಲು ಸರಕಾರ ಆದೇಶದಲ್ಲಿ ತಿಳಿಸಿರುವ ಹಿನ್ನಲೆಯಲ್ಲಿ ಬಂಟ್ವಾಳ ಪುರಸಭಾ ವ್ಯಾಪ್ತಿಯ 4 ಕಡೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.

ಪುರಸಭಾ ವ್ಯಾಪ್ತಿಯ ಪುರಸಭಾ ಕಛೇರಿ ಸಭಾಂಗಣ, ಬಿ ಸಿ ರೋಡು-ಕೈಕಂಬದ ಸೂರ್ಯವಂಶ ಕಟ್ಟಡದ ಸಭಾಂಗಣ, ಬಿ ಸಿ ರೋಡಿನ ರಂಗೋಲಿ ಹೊಟೇಲ್ ಸಭಾಂಗಣ ಹಾಗೂ ಮೆಲ್ಕಾರಿನ ಬಿರ್ವ ಸೆಂಟರ್ ಸಭಾಂಗಣದಲ್ಲಿ ಏಕಕಾಲಕ್ಕೆ ಪ್ರಸಾರ ನಡೆಯಲಿದೆ. ಫಲಾನುಭವಿಗಳು ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮ ವೀಕ್ಷಿಸಲು ಅನುವಾಗುವಂತೆ ಈ ವ್ಯವಸ್ಥೆ ಮಾಡಲಾಗಿದ್ದು, ಪುರಸಭಾ ವ್ಯಾಪ್ತಿಯ ಸಾರ್ವಜನಿಕರು ಕಾರ್ಯಕ್ರಮ ವೀಕ್ಷಣೆಗೆ ಆಗಮಿಸಬಹುದು ಎಂದು ಪುರಸಭಾ ಮುಖ್ಯಾಧಿಕಾರಿ ಕಚೇರಿಯ ಪ್ರಕಟಣೆ ತಿಳಿಸಿದೆ.

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಪುರಸಭಾ ವ್ಯಾಪ್ತಿಯ 4 ಕಡೆಗಳಲ್ಲಿ ಗೃಹಲಕ್ಷ್ಮಿ ಅನುಷ್ಠಾನ ಕಾರ್ಯಕ್ರಮದ ವೀಕ್ಷಣೆಗೆ ಅವಕಾಶ Rating: 5 Reviewed By: karavali Times
Scroll to Top