ಬಂಟ್ವಾಳ, ಆಗಸ್ಟ್ 15, 2023 (ಕರಾವಳಿ ಟೈಮ್ಸ್) : ತಾಲೂಕಿನ ತುಂಬೆ ಗ್ರಾಮದ ರಾಮಲ್ ಕಟ್ಟೆಯಲ್ಲಿ ಕಾರು ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರರಾದ ಅಣ್ಣ-ತಂಗಿ ಗಾಯಗೊಂಡ ಘಟನೆ ಸೋಮವಾರ ನಡೆದಿದ್ದು, ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾವೂರು ಗ್ರಾಮದ ನಿವಾಸಿ ಹರೀಶ್ ಪೂಜಾರಿ (45) ಅವರು ದ್ವಿಚಕ್ರ ವಾಹನದಲ್ಲಿ ತನ್ನ ತಂಗಿಯನ್ನು ಸಹ ಸವಾರಿಣಿಯಾಗಿ ಕುಳ್ಳಿರಿಸಿಕೊಂಡು ತೆರಳುತ್ತಿದ್ದ ವೇಳೆ ತುಂಬೆ ಗ್ರಾಮದ ರಾಮಲ್ ಕಟ್ಟೆಯಲ್ಲಿ ಕಾರು ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸವಾರರಿಬ್ಬರು ಕೂಡಾ ರಸ್ತೆಗೆ ಬಿದ್ದು ಇಬ್ಬರೂ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಾರ್ವಜನಿಕರು ಆಸ್ಪತ್ರೆಗೆ ಸಾಗಿಸಿದ್ದಾರೆ.
0 comments:
Post a Comment