ಬಂಟ್ವಾಳ, ಆಗಸ್ಟ್ 31, 2023 (ಕರಾವಳಿ ಟೈಮ್ಸ್) : ತಾಲೂಕಿನ ಪೆರ್ನೆ ಗ್ರಾಮದ ಕಡಂಬು ನಿವಾಸಿ ಕೆ ಮುಸ್ತಫ್ ಅವರ ಬೀಡಿ ವಕ್ರ್ಸ್ ಅಂಗಡಿಯ ಶಟರ್ ಮುರಿದು ಒಳ ನುಗ್ಗಿದ ಕಳ್ಳರು 58 ಸಾವಿರ ರೂಪಾಯಿ ನಗದು ಎಗರಿಸಿ ಪರಾರಿಯಾದ ಘಟನೆ ಬುಧವಾರ ಬೆಳಕಿಗೆ ಬಂದಿದೆ.
ಮುಸ್ತಫ್ ಅವರು ಮಂಗಳವಾರ ರಾತ್ರಿ ಅಂಗಡಿ ಬಾಗಿಲು ಹಾಕಿ ಮನೆಗೆ ತೆರಳಿದ್ದರು. ಬುಧವಾರ ಬೆಳಿಗ್ಗೆ ಅಂಗಡಿ ತೆರೆಯಲು ಬಂದಾಗ ಅಂಗಡಿಯ ಎದುರಿನ ಶಟರ್ ಬೀಗ ಮುರಿದಿದ್ದು ಕಂಡು ಬಂದಿದೆ. ಪರಿಶೀಲನೆ ನಡೆಸಿದಾಗ ಯಾರೋ ಕಳ್ಳರು ಶಟರ್ ಮುರಿದು ಅಂಗಡಿ ಒಳ ಪ್ರವೇಶಿಸಿ ಕ್ಯಾಶ್ ಡ್ರಾವರಿನಲ್ಲಿ ವ್ಯವಹಾರದ ಉದ್ದೇಶಕ್ಕಾಗಿ ಇರಿಸಲಾಗಿದ್ದ 58 ಸಾವಿರ ರೂಪಾಯಿ ನಗದು ಹಣ ಕಳವುಗೈದು ಪರಾರಿಯಾಗಿದ್ದಾರೆ.
ಈ ಬಗ್ಗೆ ಉಪ್ಪಿನಂಗಡಿ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 117/2023 ಕಲಂ 457, 380 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ತಾಲೂಕಿನ ಮಾಣಿ ಕರ್ನಾಟಕ ಪ್ರೌಢಶಾಲೆಗೆ ನುಗ್ಗಿದ ಕಳ್ಳರು ಕಂಪ್ಯೂಟರ್ ಮಾನಿಟರ್ ಕಳವುಗೈದ ಘಟನೆ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಈ ಬಗ್ಗೆ ಶಾಲಾ ಸಂಚಾಲಕ ಇಬ್ರಾಹಿಂ ಕೆ ವಿಟ್ಲ ಪೊಲೀಸರಿಗೆ ದೂರು ನೀಡಿದ್ದು, ಮಂಗಳವಾರ ಸಂಜೆ 6.30 ರಿಂದ ಬುಧವಾರ ಬೆಳಗ್ಗಿನ ಅವಧಿಯಲ್ಲಿ ಕಳವು ಕೃತ್ಯ ಬೆಳಕಿಗೆ ಬಂದಿದ್ದು, ಶಾಲಾ ಕೊಠಡಿ ಕಚೇರಿಯ ಬೀಗ ಮುರಿದು ಒಳಪ್ರವೇಶಿಸಿ ಸುಮಾರು 7 ಸಾವಿರ ರೂಪಾಯಿ ಮೌಲ್ಯದ ಕಂಪ್ಯೂಟರ್ ಮಾನಿಟರ್ ಕಳವುಗೈದು ಪರಾರಿಯಾಗಿದ್ದಾರೆ ಎಂದು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 152/2023 ಕಲಂ 454, 457, 380 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
0 comments:
Post a Comment