ಬೆಳ್ತಂಗಡಿ, ಆಗಸ್ಟ್ 24, 2023 (ಕರಾವಳಿ ಟೈಮ್ಸ್) : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 1996ರಲ್ಲಿ ದಾಖಲಾಗಿದ್ದ ಶ್ರೀಗಂಧ ಕಳವು ಪ್ರಕರಣದ ಆರೋಪಿಯಾಗಿದ್ದು, ಕಳೆದ 27 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳ ರಾಜ್ಯದ ಮಂಜೇಶ್ವರ ಸಮೀಪದ ವರ್ಕಾಡಿ ನಿವಾಸಿ ಎಸ್ ಎ ಅಶ್ರಪ್ ಎಂಬಾತನನ್ನು ಕೇರಳದಿಂದ ಪತ್ತೆ ಹಚ್ಚಿ ದಸ್ತಗಿರಿ ಮಾಡುವಲ್ಲಿ ಬೆಳ್ತಂಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಳೆದ 27 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದಾತನನ್ನು ಬೆಳ್ತಂಗಡಿ ಠಾಣಾ ಪೊಲೀಸರು ಗುರುವಾರ (ಆ 24) ಕೇರಳ ಪೊಲೀಸರ ಸಹಕಾರದೊಂದಿಗೆ ಕೇರಳದಿಂದ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈತನ ವಿರುದ್ಧ ಕಾಸರಗೋಡು ಪೊಲೀಸ್ ಠಾಣೆಯಲ್ಲಿ ಕಲಂ 279, 304(ಎ) ರಂತೆ ಹಾಗೂ ಉಪ್ಪಿನಂಗಡಿ ಮತ್ತು ಕೋಣಾಜೆ ಪೊಲೀಸ್ ಠಾಣೆಯಲ್ಲಿ ಫಾರೆಸ್ಟ್ ಕಾಯಿದೆಯಡಿ ದಾಖಲಾಗಿರುವ ಪ್ರಕರಣ ವಿಚಾರಣೆಗೆ ಬಾಕಿ ಇರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
0 comments:
Post a Comment