ಬಂಟ್ವಾಳ, ಸೆಪ್ಟೆಂಬರ್ 20, 2023 (ಕರಾವಳಿ ಟೈಮ್ಸ್) : ತಾಲೂಕಿನ ಬಿ ಮೂಡ ಗ್ರಾಮದ ಮಯ್ಯರಬೈಲು ಎಂಬಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಸೋಮವಾರ ರಾತ್ರಿ ವೇಳೆ ನಡೆದಿದೆ.
ಅಪಘಾತದಿಂದ ಗಾಯಗೊಂಡ ವ್ಯಕ್ತಿಯನ್ನು ಬಿ ಮೂಡ ಗ್ರಾಮದ ನಿವಾಸಿ ಈಶ್ವರ ಎಂದು ಹೆಸರಿಸಲಾಗಿದೆ. ಸೋಮವಾರ ರಾತ್ರಿ ಮಯ್ಯರಬೈಲು ಎಂಬಲ್ಲಿ ಈಶ್ವರ ಅವರು ರಸ್ತೆಯ ಮಧ್ಯದಲ್ಲಿದ್ದ ಡಿವೈಡರ್ ದಾಟುತ್ತಿದ್ದ ಸಂದರ್ಭ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ ಸ್ಕೂಟರ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಈಶ್ವರ ಅವರು ತೀವ್ರತರದ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment